ಇಂದಿನಿಂದ ಸಾಹಿತ್ಯ ಸಮ್ಮೇಳನ

Updated on: 

ಕ.ಪ್ರ.ವಾರ್ತೆ೤ ಹಾಸನ೤ ಮಾ 29
ಹದಿಮೂರನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸಮ್ಮೇಳನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಕಲ ಸಿದ್ದತೆಗಳನ್ನು ಕೈಕೊಂಡಿದೆ. ಮಾ.30 ಮತ್ತು 31ರಂದು ಜಿಲ್ಲಾ ಕನ್ನಡ  ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಯುವ ಹಿರಿಯ ಕವಿಗಳ ಕವಿಗೋಷ್ಠಿ ಮತ್ತು ಪ್ರಸ್ತುತ ಸಾಮಾಜಿಕ ಸಂದರ್ಭದಲ್ಲಿ ಎದುರಾಗಿರುವ ಸಮಸ್ಯೆಗಳು, ಹೊಣೆಗಾರಿಕೆ ಹಾಗೂ ಸಾಹಿತ್ಯ ಆಯಾಮಗಳು ಕುರಿತ ವಿಚಾರ ಸಂಕಿರಣ ಹಾಗೂ ಪುಸ್ತಕ ಪ್ರದರ್ಶನ ನಡೆಸುವ ಸಲುವಾಗಿ 16 ಮಳಿಗೆಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
30 ರಂದು ಬೆಳಗ್ಗೆ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ರಾಷ್ಟ್ರಧ್ವಜಾರೋಹಣ ನೆರವೇರಿಸುವರು. ಪುಸ್ತಕ ಪ್ರದರ್ಶನ ಮಳಿಗೆಯನ್ನು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪಸಿಂಗ್ ಉದ್ಘಾಟಿಸಲಿದ್ದಾರೆ.
 ಕಾರ್ಯಕ್ರಮವನ್ನು ಸಾಹಿತಿ ಡಾ.ಕಮಲಾ ಹಂಪನಾ ಉದ್ಘಾಟಿಸುವರು. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಆಶಯ ಭಾಷಣ ಮಾಡುವರು. ಸಮ್ಮೇಳನಾಧ್ಯಕ್ಷ ಡಾ.ಎಂ.ಎಸ್.ಶೇಖರ್ ಸಮ್ಮೇಳನಾಧ್ಯಕ್ಷರ ಭಾಷಣ ಮಾಡುವರು.
ಸಾಹಿತ್ಯ ಪರಿಷತ್ ಆವರಣದಲ್ಲಿ ಪೆಂಡಾಲ್ ಹಾಕಿದರೆ ದುಂದು ವೆಚ್ಚ ವಾಗುತ್ತದೆ. ಅದಕ್ಕಾಗಿ ಕಾರ್ಯಕ್ರಮಗಳನ್ನು ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಬೆಳ್ತಂಗಡಿಯಿಂದ 20 ಜನರ ಕಲಾತಂಡ ಬರಲಿದ್ದು, ಯಕ್ಷಗಾನ, ಚಿಟ್ಟಿಮೇಳ, ನಾಸಿಕ್ ಡೋಲು, ಹಾಸ್ಯಗೊಂಬೆ, ಹುಲಿವೇಷ ಸೇರಿದಂತೆ ಇತರೆ ಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಿದ್ದತೆಗಳು ನಡೆದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com