ಇಂದು ರೇಣುಕಾಚಾರ್ಯ ಯುಗಮಾನೋತ್ಸವ

Updated on: 

ಕ.ಪ್ರ.ವಾರ್ತೆ೤ ಅರಸೀಕೆರೆ೤ ಮಾ 30
ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ಮಾ.31 ಭಾನುವಾರ ಬೆಳಗ್ಗೆ 11 ಕ್ಕೆ ಜಗದ್ಗುರು ರೇಣುಕಾಚಾರ್ಯ ಯುಗಮಾನೋತ್ಸವ ಹಾಗೂ ಧರ್ಮ ಜಾಗೃತಿ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಕೆ.ವಿ.ನಿರ್ವಾಣಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾರಂಭದ  ಸಾನಿಧ್ಯವನ್ನು ಬಾಳೇಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕಾ ವೀರಸೋಮೇಶ್ವರ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆ ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಸ್ವಾಮೀಜಿ ವಹಿಸುವರು.  ಯಡಿಯೂರು  ರಂಭಾಪುರಿ ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು.
ದೊಡ್ಡಗುಣಿ ಕ್ಷೇತ್ರದ ರೇವಣ್ಣ ಸಿದ್ದೇಶ್ವರ ಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ಹೊನ್ನವಳ್ಳಿ ಕರಿ ಸಿದ್ದೇಶ್ವರ ಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಷಡಾಕ್ಷರಿ ಮಠದ ರುದ್ರಮುನಿ ಸ್ವಾಮೀಜಿ, ಡಿ.ಎಂ.ಕುರ್ಕೆ ಬೂದಿಹಾಳ್ ಮಠದ ರಾಜಶೇಖರ ಸ್ವಾಮೀಜಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಎಂ.ಶಿವಲಿಂಗೇಗೌಡ, ಮಾಜಿ ಶಾಸಕರಾದ ಕೆ.ಪಿ.ಪ್ರಭುಕುಮಾರ್, ಜಿ.ಎಸ್.ಪರಮೇಶ್ವರಪ್ಪ, ಎ.ಎಸ್.ಬಸವರಾಜ್ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮುರುಂಡಿ ಶಿವಯ್ಯ ಅವರನ್ನು ಸನ್ಮಾನಿಸಲಾಗುವುದು.
ಸರ್ವಧರ್ಮ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಿ ಕೊಡಬೇಕೆಂದು ಕೋರಲಾಗಿದೆ. ಉದ್ಯಮಿ ಚಂದ್ರಶೇಖರ್, ಷಡಾಕ್ಷರಿ, ರುದ್ರಮುನಿಸ್ವಾಮಿ ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com