ಹಾಸನ

ಮುಂದುವರಿದ ಶ್ರೀಗಂಧ ಮರಗಳ ಮಾರಣಹೋಮ

Published On :

ಹೊಳೆನರಸೀಪುರ: ತಾಲೂಕಿನ ಯಡೇಗೌಡನಹಳ್ಳಿ ಸಮೀಪದ ಹೊನ್ನಶೆಟ್ಟಿಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳ ಮಾರಣಹೋಮ ಪುನಃ ಮುಂದುವರಿದಿದ್ದು, ಈ ಭಾಗದಲ್ಲಿದ್ದ 50ಕ್ಕೂ ಹೆಚ್ಚು ಮರಗಳು ಚೋರರ ಕೃತ್ಯದಿಂದ ನೆಲ ಕಚ್ಚಿವೆ. ಈ ಚೋರರ ವಿರುದ್ಧ ಕ್ರಮಕೈಗೊಳ್ಳುವಂತೆ ಭೂಮಿಯ ಮಾಲೀಕರು 15 ದಿನಗಳಿಂದ ಅನೇಕ ಬಾರಿ ಮನವಿಗಳನ್ನು ನೀಡಿದ್ದರೂ ಅರಣ್ಯ ಇಲಾಖೆ ಮಾತ್ರ ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇರುವುದು ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಹಿಡಿದ ಕನ್ನಡಿ ಆಗಿದೆ ಎಂಬುದು ಭೂ ಮಾಲೀಕರ ದೂರಾಗಿದೆ. ಪಟ್ಟಣದ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ಸಿಬ್ಬಂದಿಯನ್ನು ನಾಮಕಾವಸ್ತೆಗೆ ಮಾತ್ರ ಗಂಧದ ಮರಗಳ ಮಾರಣಹೋಮದ ಬಳಿಗೆ ಕಳುಹಿಸಿ ಪರಿಶೀಲಿಸಿದ್ದನ್ನು ಬಿಟ್ಟರೆ ಮತ್ತೇನು ಆಗದೆ ಇರುವುದಕ್ಕೆ ಮಾಲೀಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 20ಕ್ಕೂ ಹೆಚ್ಚು ಗಂಧದ ಮರಗಳನ್ನು ಕಳೆದುಕೊಂಡಿರುವ ಭೂ ಮಾಲೀಕ ಬಿ. ಚಂದ್ರಪ್ಪ ಅವರು ಮಾತ್ರ ಈ ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸುವಲ್ಲಿ ಇಲಾಖೆಯ ಅಧಿಕಾರಿಗಳಿಗೆ ಚೋರರು ಗೊತ್ತಿದ್ದರೂ ಸಹ ಮೀನಮೇಷ ಎಣಿಸುತ್ತಿರುವುದನ್ನು ದಾಖಲೆ ಸಮೇತ ರಾಜ್ಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳದೆ ಮೀನಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ದವೇ ರಾಜ್ಯ ಸರ್ಕಾರ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಪಡಿಸಿ ಲಿಖಿತ ದೂರು ಸಲ್ಲಿಸಿದ್ದಾರೆ. ಶ್ರೀಗಂಧದ ಮರಗಳನ್ನು ಕಳೆದುಕೊಂಡಿರುವ ಬಿ. ಚಂದ್ರಪ್ಪ ಅವರ ಪ್ರಕಾರ 15 ದಿನಗಳಲ್ಲಿ 4.50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಶ್ರೀಗಂಧದ ಮರಳಗಳನ್ನು ಕೊಯ್ದು ಮಾಲೀಕನೊಂದಿಗೆ ಪರಾರಿ ಆಗಿರುವ ಚೋರರ ವಿರುದ್ಧ ಇಲಾಖೆ ಸೂಕ್ತ ಕ್ರಮಕೈಗೊಳ್ಳದೆ ಹೋದಲ್ಲಿ ಈ ಘಟನೆ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರಿ ನ್ಯಾಯ ಪಡೆಯಲು ಮುಂದಾಗುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.