ಕಲಾಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾಸನ: ಕರ್ನಾಟಕ ಬಾಲಭವನ ಸೊಸೈಟಿ, ಬೆಂಗಳೂರು ಮತ್ತು ಆಲೂರಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ 2013-14ನೇ ಸಾಲಿಗೆ ಕಲಾಶ್ರೀ ಪ್ರಶಸ್ತಿಗಾಗಿ ಆಸಕ್ತಿಯುಳ್ಳ 9 ರಿಂದ 16 ವರ್ಷದೊಳಗಿನ ಶಾಲಾ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದರ ಮೂಲಕ ಅವರಲ್ಲಿ ಆತ್ಮಸ್ಥೈರ್ಯ, ಭರವಸೆ ವ್ಯಕ್ತಿತ್ವ, ವಿಚಾರ ವಂತಿಕೆ, ಕಲಾ ಪ್ರತಿಭೆಯನ್ನು ಪ್ರೇರೇಪಿಸಲಾಗುವುದು. ಈ ನಿಟ್ಟಿನಲ್ಲಿ ಪ್ರತಿಭಾವಂತ ಮಕ್ಕಳನ್ನು ಆಯ್ದು ಕಲಾಶ್ರೀ ಪ್ರಶಸ್ತಿ ಪ್ರದಾನ ಮಾಡುವ ಉದ್ದೇಶದಿಂದಾಗಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ ಹಾಗೂ ವಿಜ್ಞಾನದಲ್ಲಿ ನೂತನ ಆವಿಷ್ಕಾರ ವಿಭಾಗಗಳಲ್ಲಿ ಭಾಗವಹಿಸಲು ಅವಕಾಶವಿದೆ. ಸ್ಪರ್ಧಾ ಶಿಬಿರವನ್ನು ನ.5 ರಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, (ಎಸ್.ಬಿ.ಎಂ. ಕಟ್ಟಡದ ಮೇಲ್ಭಾಗ), ಆಲೂರು ಇಲ್ಲಿ ಏರ್ಪಡಿಸಲಾಗಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಆಲೂರು ದೂ- 9448772080 ರವರನ್ನು ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

