13, 15 ರಂದು ಕಲಿಕೋತ್ಸವ ಕಾರ್ಯಕ್ರಮ
ಹಾಸನ: ನ 13ರಂದು ಶಾಲಾ ಹಂತದ ಕಲಿಕೋತ್ಸವ ಮತ್ತು 15 ರಂದು ಕ್ಲಸ್ಟರ್ ಟಮೂಹ ಸಂಪನ್ಮೂಲ ಕೇಂದ್ರ ಹಂತದ ಕಲಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಜಾವಗಲ್ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ವಿಷ್ಣುವರ್ಧನ್ ತಿಳಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ 2013-14ರ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಭಾ ಕಾರಂಜಿಗೆ ಬದಲಾಗಿ ಕಲಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನ. 6 ಹಾಗೂ 7 ರಂದು ಶಾಲೆಯಿಂದ ಹೊರಗುಳಿದ ಮಕ್ಕಳ ಶಾಲಾ ಹಂತದ ಸಮೀಕ್ಷೆ ನಡೆಯಲಿದ್ದು ಸಮೀಕ್ಷಾದಾರರು ಭಾಗವಹಿಸುತ್ತಾರೆ 12 ರಂದು ಜಾಥಾ ಕಾರ್ಯಕ್ರಮ ನಡೆಸಲಾಗುತ್ತದೆ. 13 ರಿಂದ 17 ರವರೆಗೆ ಶಾಲೆ ಬಿಟ್ಟ ಮಕ್ಕಳ ಮನೆ-ಮನೆ ಸಮೀಕ್ಷೆ ಮತ್ತು ಕುಟುಂಬ ಸಮೀಕ್ಷೆ ನಡೆಸಲಾಗುತ್ತದೆ ಎಂದರು. 1 ರಿಂದ 10 ನೇ ತರಗತಿಯವರೆಗಿನ ಮತ್ತು 6ರಿಂದ 16 ವರ್ಷದೊಳಗಿನ ವಯೋವಾನದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯನ್ನು ಕಟ್ಟು ನಿಟ್ಟಾಗಿ ಮಾಡಬೇಕು ಎಂದು ತಿಳಿಸಿದರು.
ಎಸ್ಡಿಎಂಸಿ ಸಮಿತಿಯವರು, ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ ಕ್ಲಸ್ಟರ್ಗೆ ಪ್ರೌಢಶಾಲೆಯ ಸಹಶಿಕ್ಷಕರೊಬ್ಬರು ನೊಡೆಲ್ ಅಧಿಕಾರಿಯಾಗಿ ಮತ್ತು ಕ್ಲಸ್ಟರ್ನ ಮೇಲ್ವಿಚಾರಕರಾಗಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಇರುತ್ತಾರೆ ಎಂದು ಹೇಳಿದರು.
ಮುಖ್ಯ ಶಿಕ್ಷಕರು ಮನೆಪಟ್ಟಿ ನಕ್ಷೆ ತಯಾರಿಸುವುದು, ಗ್ರಾಮದಲ್ಲಿ ಪ್ರಚಾರ ಮಾಡುವುದು. ಪೋಷಕರ ಮತ್ತು ಗ್ರಾಮಸ್ಥರ, ಶಿಕ್ಷಣ ಸಂಸ್ಥೆ ಸಭೆ ನಡೆಸುವುದು. ಸಮೀಕ್ಷ ತಂಡಗಳಿಗೆ ಅಗತ್ಯ ದಾಖಲೆ ಒದಗಿಸುವುದು ಮುಂತಾದ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಕಟ್ಟುನಿಟ್ಟಿನ ಯಶಸ್ಸಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ತಹಸೀಲ್ದಾರ್ ತಾಲೂಕು ಸಮಿತಿ ಅಧ್ಯಕ್ಷ, ಬಿಇಓ ಕಾರ್ಯದರ್ಶಿ, ನಾನಾ ಇಲಾಖಾಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ ಎಂದರು. ಕ್ಲಸ್ಟರ್ ವ್ಯಾಪ್ತಿಯ 23 ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

