ಕಂದಾಯ ಭೂಮಿ ಒತ್ತುವರಿ ಕಾರ್ಯಾಚರಣೆಗೆ ಮತ್ತೆ ಚಾಲನೆ
ಕ.ಪ್ರ.ವಾರ್ತೆ ಸಕಲೇಶಪುರ ನ. 5
ಕಂದಾಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆಗೆ ಮತ್ತೆ ಚಾಲನೆ ನೀಡಲಾಗಿದ್ದು, ಮಂಗಳವಾರ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು. ಶುಕ್ರವಾರದಿಂದ ಆರಂಭಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ತಾಲೂಕಿನ ಕೆಸಗುಲಿ ಗ್ರಾಮದ 15 ಎಕರೆಯಲ್ಲಿ ಬೆಳೆಯಲಾಗಿದ್ದ ಕಾಫಿ ತೋಟವನ್ನು ತೆರವುಗೊಳಿಸಿದ ನಂತರ ದೀಪಾವಳಿ ಹಬ್ಬದ ನಿಮಿತ್ತ ಎರಡು ದಿನಗಳ ಬಿಡುವು ನೀಡಲಾಗಿತ್ತು.
ಮಂಗಳವಾರ ತಹಸೀಲ್ದಾರ್ ಪಾರ್ವತಿ ನೇತೃತ್ವದಲ್ಲಿ ಗ್ರಾಮದ ಸರ್ವೆ ನಂ 48 ರಲ್ಲಿ ಒತ್ತುವರಿ ಮಾಡಿ ಬೆಳೆಯಲಾಗಿದ್ದ 20 ಎಕರೆ ಕಾಫಿ ತೋಟಗಳನ್ನು ಜೆಸಿಬಿ ಯಂತ್ರಗಳನ್ನು ಬಳಸಿ ತೆರವುಗೊಳಿಸುವ ಕಾರ್ಯವನ್ನು ಆರಂಭಿಸಲಾಯಿತು. ಈ ವೇಳೆ ಗ್ರಾಮಸ್ಥರು ಒತ್ತುವರಿ ತೆರವು ಕಾರ್ಯಾಚರಣೆಗೆ ವಿರೋಧ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಸಣ್ಣ ಹಿಡುವಳಿದಾರರೇ ಹೆಚ್ಚಿದ್ದು, ಒಂದು ಎಕರೆಗೆಗಿಂತ ಹೆಚ್ಚಿನ ಒತ್ತುವರಿಯನ್ನು ಯಾರೂ ಮಾಡಿಲ್ಲ.
ಇಲ್ಲಿರುವ ಸರ್ಕಾರಿ ಭೂಮಿಯಲ್ಲಿ ಹೇಮಾವತಿ ಹಿನ್ನೀರು ಸಂತ್ರಸ್ಥರಿಗೆ ಹಾಗೂ ಜೀತಮುಕ್ತರಿಗೆ ಹಂಚಲು ಉದ್ದೇಶಿಸಿರುವುದರಿಂದ ಗ್ರಾಮದಲ್ಲಿ ಸ್ಮಶಾನಕ್ಕೂ ಭೂಮಿ ಇಲ್ಲದಾಗಿದೆ. ಆದ್ದರಿಂದ ಸಣ್ಣ ಹಿಡುವಳಿದಾರರು ಒತ್ತುವರಿ ಮಾಡಿರುವ ಭೂಮಿಯನ್ನು ತೆರವುಗೊಳಿಸ ಬಾರದು ಎಂಬ ಗ್ರಾಮಸ್ಥರ ಮನವಿಯನ್ನು ತಿರಸ್ಕರಿಸಿದ ಅಧಿಕಾರಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ತೆರವು ಕಾರ್ಯಾಚರಣೆ ಆರಂಭಿಸಲಾಗಿದ್ದು, ನಾಳೆಯೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಹಸೀಲ್ದಾರ್ ಪಾರ್ವತಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

