ಹಾಸನ

ಕಾಡಾನೆ ಸೆರೆ ಕಾರ್ಯಾಚರಣೆಗೆ ಜನವರಿ ಅಂತ್ಯಕ್ಕೆ ಆರಂಭ: ಸಚಿವ ರೈ

Published On :

ಹಾಸನ: ಮಲೆನಾಡು ಪ್ರದೇಶದಲ್ಲಿ ರೈತರ ಬೆಳೆ, ಆಸ್ತಿ, ಪ್ರಾಣಕ್ಕೆ ಹಾನಿ ಮಾಡುತ್ತಿರುವ 30 ಕಾಡಾನೆಗಳ ಸೆರೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಜನವರಿ ಅಂತ್ಯದೊಳಗೆ ಇವುಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಸಚಿವ ರಮನಾಥ ರೈ ಹೇಳಿದರು.  ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಡಿದ ಆನೆಗಳನ್ನು ದುಬಾರೆ, ಸಕ್ಕರೆಬೈಲಿನಲ್ಲಿರುವ ಆನೆ ಶಿಬಿರಗಳಿಗೆ ಸಾಗಿಸಲಾಗುತ್ತದೆ ಎಂದರು.
ಆನೆ ಸಮಸ್ಯೆಗೆ ಕಂದಕಗಳ ನಿರ್ಮಾಣ ಮತ್ತು ಸೋಲಾರ್ ತಂತಿಬೇಲಿ ಹಾಕಲು 30 ಕೋಟಿ ಅನುದಾನ ಮೀಸಲಿಡಲಾಗಿದೆ. ಕೆಲವೆಡೆ ಸೋಲಾರ್ ತಂತಿ ಬೇಲಿ ವಿಫಲವಾಗಿರುವುದರಿಂದ ರೇಲ್ವೆ ಹಳಿಗಳನ್ನು ಬಳಸಿಕೊಂಡು ಫೆನ್ಸಿಂಗ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದಕ್ಕಾಗಿ 100 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದರು. ನಾಗರಹೊಳೆ ಅಭಯಾರಣ್ಯದಲ್ಲಿ ಈಗಾಗಲೇ 71 ಕಿ.ಮೀ. ಕಂದಕ (ಇಪಿಟಿ) ನಿರ್ಮಿಸಿದ್ದು, ಇದರಿಂದ ಸಾಕಷ್ಟು ಪ್ರಯೋಜನವಾಗಿದೆ. ಅದೇ ರೀತಿ ಇನ್ನು 41 ಕಿ.ಮೀ. ಕಂದಕವನ್ನು ನಿರ್ಮಿಸಿ ಸೋಲಾರ್ ತಂತಿಬೇಲಿ ಹಾಕಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.