ಸಂಘ, ಮಂಡಳಿಗಳ ಅಭಿವೃದ್ಧಿ ಕಾರ್ಯಕ್ರಮ
ಹಾಸನ: ಜಿಲ್ಲಾ ನೆಹರು ಯುವಕೇಂದ್ರವು ಯುವ ಸಂಘಗಳ ಅಭಿವೃದ್ಧಿ ಕಾರ್ಯಕ್ರಮವನ್ನು ನ.10ರವರೆಗೆ ಸಕಲೇಶಪುರ ತಾಲೂಕಿನಲ್ಲಿ ವ್ಯವಸ್ಥೆಗೊಳಿಸುತ್ತಿದೆ. ಕಾರ್ಯಕ್ರಮದನ್ವಯ ನೆಹರು ಯುವಕೇಂದ್ರದ ರಾಷ್ಟ್ರೀಯ ಯುವದಳ ಕಾರ್ಯಕರ್ತರು ಹಾಗೂ ಯುವ ನಾಯಕರು ಸಕಲೇಶಪುರ ತಾಲೂಕಿನಲ್ಲಿ ಅಸ್ತಿತ್ವದಲ್ಲಿರುವ ನೋಂದಾಯಿತ ಹಾಗೂ ನೆಹರು ಯುವಕೇಂದ್ರಕ್ಕೆ ಸಂಯೋಜಿಸಲ್ಪಟ್ಟಿರುವ ಸಂಘ, ಮಂಡಳಿಗಳಿಗೆ ಭೇಟಿ ನೀಡಿ ಅವುಗಳ ಕಾರ್ಯ ಚಟುವಟಿಕೆ, ಸಾಮಾಜಿಕ ಸಮಸ್ಯೆ, ಅಭಿವೃದ್ಧಿ ಕುರಿತಾದ ವಿಷಯಗಳ ಬಗ್ಗೆ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಕೊನೆಯ ದಿನದಂದು ಯುವ ಜನರ ಸಭೆಯನ್ನು ತಾಲೂಕು, ಹೋಬಳಿ ಕೇಂದ್ರ ಸ್ಥಾನದಲ್ಲಿ ನಡೆಸಲಿದ್ದಾರೆ. ಈ ರಾಷ್ಟ್ರೀಯ ಯುವ ದಳ ಕಾರ್ಯಕರ್ತರು ಸಂಘ, ಮಂಡಳಿಗಳಿಗೆ ಭೇಟಿ ನೀಡಿದಾಗ ಸಹಕರಿಸಲು ಹಾಗೂ ಸಭೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಗಣತಿ ಕಾರ್ಯಕ್ಕೆ ಅರ್ಜಿ ಆಹ್ವಾನ
ಹಾಸನ: 6ನೇ ಆರ್ಥಿಕ ಕಾರ್ಯಾಚರಣೆಯ ಅಂಗವಾಗಿ ಗಣತಿ ಕಾರ್ಯವನ್ನು 2013ನೇ ನವೆಂಬರ್ ಮತ್ತು ಡಿಸೆಂಬರ್ನಲ್ಲಿ ಹಮ್ಮಿಕೊಂಡಿರುವುದರಿಂದ ಕಾರ್ಯಕ್ಕೆ ನಿವೃತ್ತ ಶಿಕ್ಷಕರು, ಮತ್ತು ಇತರೆ ಇಲಾಖೆಯ ನಿವೃತ್ತ ನೌಕರರು, ನಿರುದ್ಯೋಗಿ ಪದವೀಧರರು, ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದವರು ಗಣತಿ ಕಾರ್ಯದಲ್ಲಿ ಭಾಗವಹಿಸಲು ಇಚ್ಚಿಸುವವರು ನಗರಸಭೆ ಕಚೇರಿಯಲ್ಲಿ ಮಾಹಿತಿ ಪಡೆಬಹುದಾಗಿದೆ. ಸರ್ಕಾರದಿಂದ ನಿಗದಿಪಡಿಸಿರುವ ಸಂಭಾವನೆಯನ್ನು ಗಣತಿಕಾರ್ಯ ಪೂರ್ಣಗೊಂಡ ನಂತರ ನೀಡಲಾಗುವುದು. ವಿವರಗಳಿಗೆ ಚಾರ್ಜ್ ಅಧಿಕಾರಿ ದೂ.9964140613, 944642752 ಸಂಪರ್ಕಿಸಲು ನಗರಸಭೆ ಪೌರಾಯುಕ್ತರು ಕೋರಿದ್ದಾರೆ.
ಅರ್ಜಿ ಆಹ್ವಾನ
ಹಾಸನ: ಎಚ್ಎಎಲ್ ಬೆಂಗಳೂರು ಇವರು 3 ವರ್ಷಗಳ ಎಲೆಕ್ಟ್ರಿಷಿಯನ್ ಅಪ್ರೆಂಟಿಸ್ ತರಬೇತಿಗಾಗಿ ಕಡು ಬಡತನದಲ್ಲಿರುವ (ಬಿಪಿಎಲ್ ಅಥವಾ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ), ಎಸ್ಸೆಸ್ಸೆಲ್ಸಿಯಲ್ಲಿ ಕನಿಷ್ಠ ಶೇ. 60ರಷ್ಟು ಅಂಕ ಗಳಿಸಿರುವ ಸಾಮಾನ್ಯ ಅಭ್ಯರ್ಥಿಗಳಿಗೆ, ಶೇ.50 ಅಂಕ ಪಡೆದ ಪರಿಶಿಷ್ಟ ಜಾತಿ/ಪಂಗಡ.ಅಂಗವಿಕಲ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋವುತಿ 15ರಿಂದ 18 ವರ್ಷ. ತರಬೇತಿ ಭತ್ಯೆ ಮತ್ತು ಇತರೆ ಭತ್ಯೆಗಳನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನ.16 ಅಂತಿಮ ದಿನ. ಅರ್ಜಿ ನಮೂನೆ ಹಾಗೂ ಇತರೆ ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಇವರನ್ನು ಖುದ್ದಾಗಿ ಅಥವಾ ದೂ. 08172-268374 ಸಂಪರ್ಕಿಸಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

