ಇಂದಿನಿಂದ ಹಾಸನದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
ಹಾಸನ: ನಗರದ ಸರ್ಕಾರಿ ಕಲಾ ಕಾಲೇಜಿನಲ್ಲಿ ಕಲಾ ಕಾಲೇಜಿನಲ್ಲಿ ನ.8 ಮತ್ತು 9 ರಂದು ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ ಎಂದು ಪ್ರಾಂಶುಪಾಲ ಐ.ಎಂ. ಮೋಹನ್ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಯುಜಿಸಿ ಪ್ರಾಯೋಜಿಕತ್ವದಲ್ಲಿ ರಾಷ್ಟ್ರೀಯ ವಿಚಾರಸಂಕಿರಣವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ನ.8 ರಂದು ಬೆಳಗ್ಗೆ 10 ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹೆಚ್.ಎಸ್. ಪ್ರಕಾಶ್ ನೆರವೇರಿಸುವರು. ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ, ಜಿಲ್ಲಾಧಿಕಾರಿ ಅನ್ಬುಕುಮಾರ್ ಇತರರು ಭಾಗವಹಿಸಲಿದ್ದಾರೆ. ಒಟ್ಟು 5 ವಿಚಾರಗೋಷ್ಠಿ ನಡೆಯಲಿದೆ ಎಂದು ಹೇಳಿದರು. ನ. 9 ರಂದು ಸಂಜೆ 4 ಕ್ಕೆ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ನಡೆಯಲಿದೆ. ಸುಮಾರು 80 ಜನ ತಜ್ಞರು ಸಂಶೋಧನಾ ಲೇಖನಗಳನ್ನು ಮಂಡಿಸಲಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ಡಾ. ಬಿ.ಎಲ್. ಭಾಗ್ಯಲಕ್ಷ್ಮಿ, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಇತರರು ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಿ.ಜಿ. ಕೃಷ್ಣೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

