ಕಬ್ಬು ಬೆಳೆಗಾರರಿಗೆ 400 ರು. ಸಹಾಯಧನ ನೀಡಿ: ಎಚ್ಡಿಕೆ
ಹಾಸನ: ಕಬ್ಬು, ಬತ್ತಕ್ಕೆ ಬೆಂಬಲ ಬೆಲೆ ನಿಗದಿ ಮಾಡಲು ವಿಳಂಬ ಮಾಡುತ್ತಿರುವುದನ್ನು ತರಾಟೆಗೆ ತೆಗೆದುಕೊಂಡ ಅವರು, ಕಬ್ಬಿಗೆ ಪ್ರತಿಟನ್ಗೆ ಕನಿಷ್ಠ 400 ರು. ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು. ಈ ಹಿಂದಿನ ಬಿಜೆಪಿ ಸರಕಾರಕ್ಕಿಂತಲೂ ಕೆಟ್ಟ ರೀತಿಯಲ್ಲಿ ಕಾಂಗ್ರೆಸ್ ಆಡಳಿತ ನೀಡುತ್ತಿದೆ. ಎಲ್ಲಾ ಅಗ್ಗದ ಯೋಜನೆ ಘೋಷಣೆ ಬಿಟ್ಟರೆ ಪ್ರತಿ ಹಂತದಲ್ಲೂ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯವಾಗಿದೆ. ಪ್ರತಿಪಕ್ಷ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿರುವುದು ಸರಿಯಲ್ಲ ಎಂದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು. ಹೈದ್ರಾಬಾದ್ ಕರ್ನಾಟಕದ ಭಾಗ್ಯದ ಬಾಗಿಲು ತೆರೆದಿದೆ ಎಂದು ಹೇಳುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ಮೀಸಲು ಮೂಲಕ ಕೇವಲ ಉದ್ಯೋಗ ನೀಡುವುದೇ ದೊಡ್ಡ ಕೊಡುಗೆ ಎಂದು ಬೀಗದೆ, ಆ ಭಾಗಕ್ಕೆ ಮೂಲಭೂತ ಸೌಕರ್ಯ ನೀಡುವ ಕಾರ್ಯಕ್ರಮಗಳನ್ನು ಮೊದಲು ಘೋಷಣೆ ಮಾಡಲಿ. ಕಾಯ್ದೆ 371 ಜೆ ಅನುಷ್ಠಾನದಿಂದಲೇ ಎಲ್ಲವೂ ಆಗೋದಿಲ್ಲ. ಬದಲಾಗಿ ಉತ್ತರ ಕರ್ನಾಟಕದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಯೋಜನೆ ಮತ್ತು ಆರ್ಥಿಕ ಹೂಡಿಕೆ ಎಷ್ಟು ಅನ್ನೋದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

