ಕುಡಿವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹ
ಕ.ಪ್ರ.ವಾರ್ತೆ ಬೇಲೂರು ನ. 7
ತಾಲೂಕಿನಲ್ಲಿ ಹಲವೆಡೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದ್ದು ಜಿ.ಪಂ. ತಾಲೂಕು ಹಾಗೂ ಗ್ರಾಮಪಂಚಾಯಿತಿ ಸದಸ್ಯರು ಈ ಬಗ್ಗೆ ಗಮನಹರಿಸುವಂತೆ ಶಾಸಕ ವೈ.ಎನ್. ರುದ್ರೇಶಗೌಡ ತಿಳಿಸಿದರು.
ತಾಲೂಕು ಪಂಚಾಯ್ತಿ ವತಿಯಿಂದ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಿಗಳು ಸರ್ಕಾರದ ಆಸ್ತಿಯನ್ನು ಸಮರ್ಪಕವಾಗಿ ಬಳಕೆ ಮಾಡಿದಾಗ ಅಯಾ ಸಂಸ್ಥೆಗಳು ಆರ್ಥಿಕವಾಗಿ ಬಲಪಡಿಸಲು ಸಾಧ್ಯವಾಗುತ್ತದೆ. ಇದಕ್ಕೆ ಪೂರಕವಾಗಿ ಜನಪ್ರತಿನಿಧಿಗಳು ಅಧಿಕಾರಿಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಡಿ.ಚಂದ್ರೇಗೌಡ ಮಾತನಾಡಿ, ಸುಮಾರು 7 ಲಕ್ಷ ರು. ಗಳಲ್ಲಿ ನಿರ್ಮಾಣವಾಗಿರುವ ಮಳಿಗೆಗಳನ್ನು ನಿರ್ಮಿಸಿರುವುದು ಶ್ಲಾಘನೀಯ ಪಂಚಾಯ್ತಿಗಳು ಸರ್ಕಾರ ನಿಧಿ ಯೋಜನೆಯಡಿ ನೀಡುವ ಮೂಲಗಳನ್ನು ಸರಿಯಾಗಿ ಬಳಸಿಕೊಂಡು ಸರ್ಕಾರದ ಜಾಗಗಳಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡುವ ಮೂಲಕ ಅರ್ಧಿಕ ಮೂಲಗಳನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸರ್ಕಾರ ಜಿಲ್ಲಾ ಪಂಚಾಯ್ತಿ ಸದಸ್ಯರಿಗೆ ಕೇವಲ 15 ಲಕ್ಷ ರು. ಅನುದಾನ ನೀಡುತ್ತಿದೆ. ಅದರೆ ಈ ಅನುದಾನದಲ್ಲಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಅನುದಾನ ಸಾಕಾಗುತ್ತಿಲ್ಲ. ಶಾಸಕರು ಈ ಬಗ್ಗೆ ಗಮನ ಹರಿಸಿ ಶಾಸಕರ ಅನುದಾನದಲ್ಲಿ ತಾಲೂಕಿನ ಹಲವೆಡೆ ಕುಡಿಯುವ ನೀರಿಗೆ ಬೋರ್ಣವೆಲಲ್ಕೊರೆಸಲು ಅಸಕ್ತಿ ತೋರುವಂತೆ ಮನವಿ ಮಾಡಿದರು.
ಸಭೆಯಲ್ಲಿ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಸುಮಿತ್ರ ರುದ್ರಯ್ಯ, ಉಪಾಧ್ಯಕ್ಷೆ ಕಮಲಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಹೇಮಾವತಿ ಮಂಜುನಾಥ್, ಜಿ.ಟಿ.ಇಂದಿರಾ, ಜಯಶೀಲ, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಂ.ಶಿವಣ್ಣ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

