ಹಾಸನ

ವೈದ್ಯ ಕಾಲೇಜು ಅಭಿವೃದ್ಧಿಗೆ ಸೂಕ್ತ ಅನುದಾನ ನೀಡಿ

Published On :

ಕ.ಪ್ರ.ವಾರ್ತೆ    ಹಾಸನ    ನ. 7
ಹಾಸನ ನಗರದ ವೈದ್ಯಕೀಯ ಕಾಲೇಜಿಗೆ ಗುರುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು  ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಭೇಟಿ ನೀಡಿ ಕಾಲೇಜಿನ ಲೆಕ್ಕಪತ್ರ ಸೇರಿದಂತೆ ಕಡತಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ರು.
ಹಾಸನಾಂಬ ವೈದ್ಯಕೀಯ ಕಾಲೇಜು ಮತ್ತು ನೂತನ ಆಸ್ಪತ್ರೆ ಕಟ್ಟಡದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸೂಕ್ತ ಅನುದಾನ ಒದಗಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹಾಸನ ಮತ್ತು ರೋಗಿಗಳ ಹಿತ ಕಾಯುವಂತೆ ದೇವೇಗೌಡರು, ಸಚಿವರಿಗೆ ಮನವಿ ಮಾಡಿದರು.
ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣವಾದರೂ ಮೂಲ ಸೌಕರ್ಯ ಯಂತ್ರೋಪಕರಣಗಳ ಕೊರತೆಯಿಂದ ಇನ್ನೂ ಕಾರ್ಯಾರಂಭವಾಗಿಲ್ಲ. ಹೆಚ್ಚಿನ ಚಿಕಿತ್ಸೆಗೆ ಮೈಸೂರು, ಬೆಂಗಳೂರುಗಳಿಗೆ ತೆರಳಬೇಕಿದೆ. ಈ ಹಿನ್ನೆಲೆಯಲ್ಲಿ ಹಾಸನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಅಗತ್ಯ ಅನುದಾನ ಒದಗಿಸಿ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕಿದೆ ಎಂದು ಅವರು ತಿಳಿಸಿದರು.
ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಬಹಳ ಶ್ರಮವಹಿಸಲಾಗಿದೆ. ಅದು ಸಾರ್ಥಕವಾಗಬೇಕಾದರೆ ಸುವ್ಯವಸ್ಥಿತ ಆಸ್ಪತ್ರೆ ಕಾರ್ಯ ಆರಂಭಿಸಬೇಕು ಈ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಗೌಡರು ಸಚಿವರ ಗಮನಕ್ಕೆ ತಂದರು.
ಶಾಸಕ  ಹೆಚ್.ಡಿ. ರೇವಣ್ಣ ಅವರು, ಜಿಲ್ಲಾ ಆಸ್ಪತ್ರೆ ಕಟ್ಟಡ ಸ್ಥಳಾಂತರಗೊಂಡು ಸಾವಿರ ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿದರೆ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶವೂ ದೊರೆಯುತ್ತದೆ. ವೈದ್ಯರ ಕೊರತೆಯೂ ನೀಗುತ್ತದೆ, ಹಾಸನ, ಕೊಡಗು ಚಕ್ಕಮಗಳೂರು ಜಿಲ್ಲೆಗಳ ರೋಗಿಗಳಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳು ಲಭ್ಯವಾಗಲಿವೆ. ಅಲ್ಲದೆ ಆಸ್ಪತ್ರೆಯಲ್ಲಿರುವ ಬಳಕೆದಾರರ ನಿಧಿಯಲ್ಲಿ ಲಭ್ಯವಿರುವ ಅನುದಾನದಲ್ಲಿ ತುರ್ತು ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಆಸ್ಪತ್ರೆ ಅಧಿಕಾರಿಗಳಿಗೆ ನಿರ್ದೇಶನ  ನೀಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಶಾಸಕರಾದ ಹೆಚ್.ಎಸ್. ಪ್ರಕಾಶ್ ಹಾಸನಾಂಬ ವೈದ್ಯಕೀಯ ಕಾಲೇಜಿನಲ್ಲಿರುವ ಕೊರತೆಗಳು ಆಧ್ಯತೆ ಮೇರೆಗೆ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸಚಿವರ ಮನ ಸೆಳೆದರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ  ಅಂಬಿಕಾ ರಾಮಣ್ಣ, ಹಾಸನಾಂಬ ವೈದ್ಯಕೀಯ ಕಾಲೇಜಿನ ನಿರ್ದೇಶಕ  ಡಾ. ರಾಚೇಗೌಡ, ಜಿಲ್ಲಾ ಶಸ್ತ್ರ ಚಿಕಿತ್ಸಕ  ಡಾ.ಶಂಕರ್ ಇದ್ದರು.
ವೈದ್ಯಕೀಯ ಕಾಲೇಜಿನಲ್ಲಿ ಸಭೆಯ ನಂತರ ಸಚಿವರು ಶಾಸಕರು  ಹಾಗೂ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ನೂತನವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಸಕರಾದ ರೇವಣ್ಣ ಅವರು ಆಸ್ಪತ್ರೆಯನ್ನು ಹನ್ನೆರೆಡು ಅಂತಸ್ತುಗಳಿಗೆ ಏರಿಸಿ 1000 ಹಾಸಿಗೆಗಳ ಸಂಪೂರ್ಣ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಯೋಜಿಸಲಾಗಿದೆ. ವೈದ್ಯಾಧಿಕಾರಿಗಳ ವಸತಿ ವ್ಯವಸ್ಥೆಗೂ ಜಾಗ ಮೀಸಲಿರಿಸಲಾಗಿದೆ. ಆಸ್ಪತ್ರೆ ಕಟ್ಟಡ ಸ್ಥಳಾಂತರದ ನಂತರ ಆ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿ ಆಡಳಿತ ವಿಭಾಗವನ್ನು ಅಲ್ಲಿಗೆ ಸ್ಥಳಾಂತರಿಸಬೇಕಿದೆ ಎಂದರು.
 ಎಲ್ಲರ ಕೋರಿಕೆಗಳು ಹಾಗೂ ಕಟ್ಟಡ ಪರಿಶೀಲಿಸಿದ ಸಚಿವರು ಅಗತ್ಯ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.