ಹಾಸನ

ಹಂತಹಂತವಾಗಿ ಸೌಲಭ್ಯ; ಸಚಿವರ ಭರವಸೆ

Published On :

ಕ.ಪ್ರ.ವಾರ್ತೆ    ಹಾಸನ    ನ. 7
ಇಲ್ಲಿನ ವೈದ್ಯಕೀಯ ಕಾಲೇಜಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ.
ವೈದ್ಯಕೀಯ ಕಾಲೇಜು ಮತ್ತು ಅದಕ್ಕೆ ಸಂಬಂಧಪಟ್ಟ ಆಸ್ಪತ್ರೆಗಳು ಸರ್ಕಾರಗಳ ಅನುದಾನದಿಂದಲೇ ನಡೆಯಬೇಕು. ಅವುಗಳಿಗೆ ಅವುಗಳದ್ದೇ ಆದ ಆದಾಯದ ಮೂಲಗಳು ಇಲ್ಲ. ಈಗ ಸರ್ಕಾರಗಳು ನೀಡುವ ಅನುದಾನದ ಕೊರತೆಯೂ ಇದೆ. ಆದ್ದರಿಂದ ತತ್ ಕ್ಷಣದಲ್ಲಿ ಕಾಲೇಜು, ಆಸ್ಪತ್ರೆಗಳಿಗೆ ಅನುದಾನ ಒದಗಿಸಲು ಕಷ್ಟವಾಗುತ್ತದೆ. ಅನುದಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ನಿಯಮಗಳ ಪ್ರಕಾರ ಹಾಸನ ವೈದ್ಯಕೀಯ ಕಾಲೇಜಿಗೆ ಅಗತ್ಯ ಸೌಲಭ್ಯ ಒದಗಿಸಲು ಬೇಕಾದ ಹಣ ಬಿಡುಗಡೆ ಮಾಡುವುದು ಮತ್ತು ಹೈಟೆಕ್ ಆಸ್ಪತ್ರೆಗೆ ಬೇಕಾದ ಉಪಕರಣಗಳು ಮತ್ತಿತರ ಬಗ್ಗೆ ಕಾಲೇಜಿನ ನಿರ್ದೇಶಕರೊಡನೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಹೈಟೆಕ್ ಆಸ್ಪತ್ರೆಗೆ 40 ಕೋಟಿ ಬಿಡುಗಡೆ ಮಾಡುವ ಬಗ್ಗೆಯೂ ಸಹ ಸದ್ಯದಲ್ಲೇ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು.
ಕ್ಯಾನ್ಸರ್ ಸೆಂಟರ್: ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಈಗಾಗಲೇ ಉದ್ದೇಶಿಸಿದ್ದು, ಸದ್ಯದಲ್ಲೇ ಆರಂಭಿಸಲಾಗುವುದು. ಹಾಸನ ಕಾಲೇಜಿನಲ್ಲಿ ಸ್ನಾತಕೋತ್ತರ ಕೋರ್ಸ್ (ಪಿಜಿ) ಆರಂಭಿಸಲು ಬೇಕಾದ ಬೋಧನಾ ಸಿಬ್ಬಂದಿ ಮತ್ತಿತರ ಅಗತ್ಯತೆಗಳು ಪೂರೈಸಿದ ನಂತರವೇ ಎಂಸಿಐ ಒಪ್ಪಿಗೆ ನೀಡುತ್ತದೆ. ಈ ಹಿನ್ನೆಲೆಯಲ್ಲಿ ಬೋಧನಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಬೇಕಾಗಿದೆ ಎಂದರು.
ಕ್ರಮ: ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು ಕರ್ತವ್ಯದ ವೇಳೆ ಖಾಸಗಿ ಕ್ಲಿನಿಕ್ಗಳಲ್ಲಿ ಕಾರ್ಯ ನಿರ್ವಹಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಕಡ್ಡಾಯವಾಗಿ ವೈದ್ಯರು ಒಂದು ವರ್ಷ ಸೇವೆ ಸಲ್ಲಿಸಬೇಕೆಂಬ ಕಾನೂನನ್ನು ಪರಿಣಾಮವಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಮಹೇಶ್, ಮುನಿಯಪ್ಪ, ಎಚ್.ಕೆ. ಜವರೇಗೌಡ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.