ಹಾಸನ

6ನೇ ಆರ್ಥಿಕ ಗಣತಿ

Published On :

ಹಾಸನ: ರಾಜ್ಯಾದ್ಯಂತ 6 ನೇ ಆರ್ಥಿಕ ಗಣತಿಯನ್ನು ನವೆಂಬರ್ 2013ರ ಅವಧಿಯಲ್ಲಿ ಭಾರತ ಸರ್ಕಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯ ಮತ್ತು ಕರ್ನಾಟಕ ಸರ್ಕಾರದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಹಭಾಗಿತ್ವದಲ್ಲಿ ರಾಜ್ಯದಲ್ಲಿ ನಡೆಸಲಾಗುವುದು.  ಈ ಗಣತಿಯನ್ನು ಅಂಕಿಅಂಶ ಸಂಗ್ರಹಣೆ ಕಾಯಿದೆ, 2008ರಡಿಯಲ್ಲಿ ಕೈಗೊಳ್ಳಲಾಗುತ್ತಿದ್ದು, ಗಣತಿಯಲ್ಲಿ ಎಲ್ಲಾ ಉದ್ಯಮ, ಸಂಸ್ಥೆಗಳಿಂದ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ. ಆದುದರಿಂದ ಸಾರ್ವಜನಿಕರು ನಿಮ್ಮ ಮನೆ, ಉದ್ಯಮ, ಸಂಸ್ಥೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಸಂಪೂರ್ಣ ಸಹಕಾರ ನೀಡುವ ಮೂಲಕ ಯೋಜನೆಗಳನ್ನು ರೂಪಿಸಲು ಸಂಪೂರ್ಣ ಹಾಗೂ ನಿಖರವಾದ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.