ಹಾಸನ

ಲೋಕಾ ಪೊಲೀಸ್ ಅಧೀಕ್ಷಕರ ಪ್ರವಾಸ

Published On :

ಹಾಸನ: ಲೋಕಾಯುಕ್ತ ಎಸ್ಪಿ ಸಿ.ಬಿ. ವೇದಮೂರ್ತಿ ಮತ್ತು ತಂಡದವರು ನ. 8 ರಂದು ಬೆಳಿಗ್ಗೆ 9-30 ರಿಂದ  ಮಧ್ಯಾಹ್ನ  2 ರವರೆಗೆ   ಸಕಲೇಶಪುರ ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ರಿಂದ ಜೆ 5-30 ರವರೆಗೆ ಬೇಲೂರು ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವರು. ಭೇಟಿ ಸಮಯದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು ಆ ಸಮಯದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳುನ್ನು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಹಾಸನ ವಿಭಾಗದ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ತಪ್ಪಿದ ಮತ್ತೊಂದು ಬಸ್ಗೆ ಬೆಂಕಿ ಪ್ರಕರಣ
ಬೆಂಗಳೂರು:  ಆಂಧ್ರಪ್ರದೇಶದ ಮೆಹಬೂಬ್ ನಗರ ಸಮೀಪ ಜಬ್ಬಾರ್ ಟ್ರಾವೆಲ್ಸ್ ಬಸ್ ದುರಂತ ಜನರ ಮನಸ್ಸಿನಲ್ಲಿ ಹಸಿಯಾಗಿರುವಾಗಲೇ ಬೆಂಗಳೂರಿನ ಗೊರಗುಂಟೆಪಾಳ್ಯ ಸಮೀಪ ಕೆಎಸ್ಆರ್ಟಿಸಿ ರಾಜಹಂಸ ಬಸ್ನಲ್ಲಿ ಆಕಸ್ಮಿಕ ಅಗ್ನಿ ಅನಾಹುತ ಸಂಭವಿಸಿದೆ. ಚಾಲಕ ಹಾಗೂ ನಿರ್ವಹಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ನೊಂದಿಗೆ ಪ್ರಯಾಣಿಕರ ಲಗೇಜುಗಳು ಸುಟ್ಟು ಕರಕಲಾಗಿವೆ. ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹಾಸನದಿಂದ ಹೊರಟ ಬಸ್ನಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.