'ಆತ್ಮರಕ್ಷಣಾ ಕಲೆ ಕರಾಟೆಗೆ ಪ್ರೋತ್ಸಾಹ ಸಿಗುತ್ತಿಲ್ಲ'
ಕನ್ನಡಪ್ರಭ ವಾರ್ತೆ ಆಲೂರು ನ.8
ಇತರೆ ಕ್ರೀಡೆಗಳಿಗೆ ದೊರೆಯುತ್ತಿರುವ ಪ್ರೋತ್ಸಾಹ ಕರಾಟೆಯಂತಹ ಆತ್ಮ ರಕ್ಷಣಾ ಕಲೆಗೆ ದೊರಕುತ್ತಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ.ಪುಷ್ಪಲತಾ ವಿಷಾದಿಸಿದರು.
ಪಟ್ಟಣದ ಮನ್ಸೂರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬಾಲಕ ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃಧ್ಧಿಸುವುದರೊಂದಿಗೆ ಮಕ್ಕಳಲ್ಲಿ ಅಡಗಿರುವ ಸುಪ್ತ ಶಕ್ತಿ ಹಾಗೂ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪುರಾತನ ಕ್ರೀಡೆಯಾದ ಕರಾಟೆಯನ್ನು ನಾವು ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ ಎಂದರು.
ಎಲ್ಲಾ ಕ್ರೀಡೆಗಳಂತೆ ಕರಾಟೆಯನ್ನೂ ಪ್ರೋತ್ಸಾಹಿಸಬೇಕು. ಚಿಕ್ಕಂದಿನಿಂದಲೇ ಮಕ್ಕಳು ಇದನ್ನು ಅಭ್ಯಾಸ ಮಾಡಿದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ದೇಶಕ್ಕೇ ಕೀರ್ತಿ ತರಬಹುದು. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳಿಂದ ಪಾರಾಗಲು ಕರಾಟೆ ಮಹಿಳೆಗೆ ಆಶಾಕಿರಣವಾಗಿ ತೋರುತ್ತಿದೆ ಎಂದು ನುಡಿದರು. ಹೆಣ್ಣು ಮಕ್ಕಳು ಕರಾಟೆಯನ್ನು ಕರಗತ ಮಾಡಿಕೊಂಡಲ್ಲಿ ಅಸಹಾಯಕ ಮನೋಭಾವ ದೂರವಾಗಿ ಆತ್ಮ ವಿಶ್ವಾಸ ಬೆಳೆಯುತ್ತದೆಯೆಂದ ಅವರು ಇಲ್ಲಿ ಸ್ಪರ್ಧಾಳುಗಳಿಗೆ ಸೋಲು ಗೆಲುವು ಮುಖ್ಯವಲ್ಲ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವ ಬೆಳೆಸಿ ಕೊಳ್ಳಬೇಕೆಂದರು.
ಉಪ ನಿರ್ದೇಶಕ ಜಿ.ಆರ್.ಬಸವರಾಜ್, ಡಿಪಿಇಓ ಈಶ್ವರಪ್ಪ, ಬಿ.ಆರ್.ಸಿ.ರವಿಪ್ರಕಾಶ್, ಪ್ರಾಂಶುಪಾಲ ಮುನಾವರ್ಪಾಶ, ಟಿಪಿಇಓ ನಾಗರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವರದರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

