ಬೈಕ್ ಕಳ್ಳನ ಬಂಧನ
ಹಿರೀಸಾವೆ (ಚನ್ನರಾಯಪಟ್ಟಣ ತಾ.): ಬೈಕ್ಗಳನ್ನು ಕಳವು ಮಾಡುತ್ತಿದ್ದ ಕಳ್ಳನನ್ನು ಹಿರೀಸಾವೆ ಎಸ್ಐ ರೇಖಾಬಾಯಿ ಹಾಗೂ ಸಿಬ್ಬಂದಿ ಬಂಧಿಸಿ, ಬೈಕ್ ವಶಪಡಿಸಿಕೊಂಡಿದ್ದಾರೆ. ಹಿರೀಸಾವೆ ಸಮೀಪದ ರಾಜಾಪುರ ವಡ್ಡರಕಾಲೋನಿಯ ರಂಗನಾಥ ಎಂಬುವರ ಮಗ ಮಂಜುನಾಥ ಬಂಧಿತ ಯುವಕ.
ಈತ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಬಿದರಕಲ್ಲು ಬುದ್ಧಜ್ಯೋತಿ ಲೇಔಟ್ನಿಂದ ಯಮಾಹ ಬೈಕನ್ನು ಕಳ್ಳತನ ಮಾಡಿ ತಂದು ಹಿರೀಸಾವೆಯಲ್ಲಿ ಮಾರಾಟ ಮಾಡುವ ಪ್ರಯತ್ನದಲ್ಲಿದ್ದಾಗ ಪೊಲೀಸರು ಬಂಧಿಸಿ ವಿಚಾರಿಸಿದಾಗ ಕಳ್ಳತನ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

