ಹಾಸನ

ರಸ್ತೆ ಅಪಘಾತ: ಇಬ್ಬರು ಮಹಿಳೆಯರ ಸಾವು

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ನ. 8
ಹೊಂಡಾ ಆಕ್ಟೀವಾ ಮತ್ತು ಟೆಂಪೋ ಪರಸ್ವರ ಡಿಕ್ಕಿ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ ಘಟನೆ ನಗರದ ಹೊರ ವಲಯದಲ್ಲಿ ಸಂಭವಿಸಿದೆ. ತಾಲೂಕಿನ ಜನಿವಾರದ ನಿವಾಸಿ ಸುಜಾತ (20), ಮತ್ತು ದಿವ್ಯ  (24) ಮೃತಪಟ್ಟ ದುರ್ದೈವಿಗಳು.
ಎಂದಿನಂತೆ ಮನೆಯಿಂದ ತನ್ನ ಹೊಂಡಾ ಆಕ್ಟೀವಾದಲ್ಲಿ ಕೆಲಸಕ್ಕೆ ಹೊರಡುತ್ತಿದ್ದ ದಿವ್ಯ, ಬಸ್ಗಾಗಿ ಕಾಯುತ್ತಿದ್ದ  ತನ್ನ ಸ್ನೇಹಿತೆ ಸುಜಾತಳನ್ನು ಕಂಡು ಡ್ರಾಪ್ ಮಾಡುವುದಾಗಿ ಹೇಳಿ ಕೂರಿಸಿಕೊಂಡು ಹೋಗುತ್ತಿದ್ದಳು. ಕುಪ್ಪಳಿ ಬಳಿ ಕ್ರಾಸ್ ಮಾಡುವಾಗ ಎದುರಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಗೆ ಬಿದ್ದ ಇಬ್ಬರೂ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ದಿವ್ಯ ನಗರದ ಆರ್ಕೆಟಿಕ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ವಿವಾಹವಾಗಿರುವ ಆಕೆಗೆ ಮಗು ಇದೆ.  ಸುಜಾತ ನಗರದ ಕೆ.ಆರ್. ಪುರಂ ಮಣಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಸ್ಥಳಕ್ಕೆ ಎಸ್ಸೈ ಭಾನು ಭೇಟಿ ನೀಡಿದ್ದರು. ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.