ಹಾಸನ

ಅಂಧರ ಬಾಳಿಗೆ ಬೆಳಕಾಗಿ: ಸ್ವಾಮೀಜಿ

Published On :

ಕನ್ನಡಪ್ರಭ ವಾರ್ತೆ೤ ಹಾಸನ೤ ನ. 8
ಇಂದಿನ ದಿನಗಳಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವಂಥ ನೇತ್ರ ವೈದ್ಯರು ತಯಾರಾಗಬೇಕಾಗಿದೆ. ಆಗ ಮಾತ್ರ ಅಂಧರ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಧ್ಯ ಎಂದು ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ. ಕೆ.ಎಸ್. ಪ್ರಕಾಶ್ ಅಭಿಪ್ರಾಯ ಪಟ್ಟರು.
ಶುಕ್ರವಾರ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಜ್ಯ ನೇತ್ರ ತಜ್ಞರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಜಗತ್ತಿನಲ್ಲಿ ಮನುಷ್ಯ ಒತ್ತಡದಲ್ಲಿ ಬದುಕಬೇಕಾದ ಅನಿವಾರ್ಯತೆ ಒದಗಿದೆ. ಇದರಿಂದ ಆರೋಗ್ಯ ಸ್ಥಿತಿ ಏರುಪೇರಾಗುವುದು ಸಾಮಾನ್ಯವಾಗಿದೆ. ಕಣ್ಣು ಮನುಷ್ಯನಿಗೆ ಅತ್ಯಗತ್ಯವಾಗಿ ಬೇಕಾದ ಅಂಗ. ಅದನ್ನು ಸಂರಕ್ಷಿಸುವಲ್ಲಿ ತಜ್ಞ ವೈದ್ಯರು ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಬೇಕಾಗಿದೆ ಎಂದು ಹೇಳಿದರು.
ಉತ್ತಮ ಮಟ್ಟದ ಚಿಕಿತ್ಸೆ ಜನರಿಗೆ ಸಿಗಲು ಉತ್ತಮ ಗುಣಮಟ್ಟದ ನೇತ್ರ ವೈದ್ಯಕೀಯ ಶಿಕ್ಷಣವನ್ನು ಪಡೆಯಲೇ ಬೇಕಾಗುತ್ತದೆ ಎಂಬ ಅರಿವು ಎಲ್ಲರಲ್ಲಿಯೂ ಇರಬೇಕು. ಆಗ ಮಾತ್ರ ದೇಶದ ಜನರಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ. ಇಂದು ನೇತ್ರ ತಜ್ಞರು ಮಾದರಿ ಉಪಕರಣಗಳನ್ನು ಬಳಸಿ ನೇತ್ರ ಚಿಕಿತ್ಸೆ ಮಾಡುತ್ತಿದ್ದಾರೆ. ಇದರಿಂದ ಅಂಧತ್ವ ಕಡಿಮೆಯಾಗುತ್ತಿದೆ. ವೈದ್ಯರು ತಮ್ಮ ವೃತ್ತಿಯಲ್ಲಿ  ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ರೂಢಿಸಿಕೊಂಡರೇ ವೃತ್ತಿ ಪರತೆ ಹೆಚ್ಚಾಗುತ್ತದೆ ಎಂದು ವಿಶ್ಲೇಷಿಸಿದರು.
ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಅವರು ಮಾತನಾಡಿ, ಕಣ್ಣು ಕಳೆದು ಬಡವರಿಗೂ ಕಡಿಮೆ ವೆಚ್ಚದಲ್ಲಿ ಶಸ್ತ್ರ ಚಿಕಿತ್ಸೆ ನೀಡಿ ಅವರ ಬಾಳಿಗೆ ಬೆಳಕನ್ನು ನೀಡಬೇಕಾಗಿದೆ. ಸಮಾಜದ ಎಲ್ಲಾ ಕ್ಷೇತ್ರದ ಪರಿಣಿತರಿಗೂ ಸಾಮಾಜಿಕ ಜವಾಬ್ದಾರಿ ಇದೆ. ಮಾನವನಿಗೆ ಕಣ್ಣು ಅತಿ ಮುಖ್ಯ. ಅಂಧತ್ವ ನಿವಾರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರಗಳು ಆನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳ ಅನುಕೂಲ ಸಾಮಾನ್ಯ ಜನರಿಗೆ ಆಗಬೇಕೆಂದರು.
ವೃತ್ತಿಯ ಜ್ಞಾನ ಮಟ್ಟ ಎತ್ತರಕ್ಕೆ: ಹಾಸನ ವೈದ್ಯಕೀಯ ಕಾಲೇಜು ಮತ್ತು ನೇತ್ರ ತಜ್ಞರ ಸಂಘ ಇಂತಹ ಸಮ್ಮೇಳನವನ್ನು ಆಯೋಜಿಸಿರುವುದು ಮೆಚ್ಚುವಂಥದ್ದು ಎಂದು ಶ್ಲಾಘಿಸಿದ ಶ್ರೀಗಳು, ಸಮ್ಮೇಳನಕ್ಕೆ ಬಂದಿರುವ ತಜ್ಞ ವೈದ್ಯರು ಇಲ್ಲಿ ನಡೆಯುವ ವಿಚಾರ ಮಂಥನದಲ್ಲಿ ಭಾಗವಹಿಸಿ ವೃತ್ತಿಯ ಜ್ಞಾನ ಮಟ್ಟವನ್ನು ಎತ್ತರಕ್ಕೆ ಏರಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ರಾಜ್ಯಾದ್ಯಂತದಿಂದ 900 ನೇತ್ರ ತಜ್ಞರು ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಉಪ ಕುಲಪತಿ ಡಾ. ಕೆ.ಎಸ್.ಪ್ರಕಾಶ್, ನೇತ್ರ ತಜ್ಞರ ಸಂಘದ ರಾಜ್ಯಾಧ್ಯಕ್ಷ ಡಾ. ಮಹಾದೇವ್ ಉನ್ನತಿ, ಪಿ.ಎಲ್. ನಟರಾಜ್, ಡಾ. ಸಾಹಿ ಗಿರಿಧರ್ ಕಾಮತ್, ಡಾ. ಎ.ಆರ್. ಶಂಕರ್, ಡಾ. ಶಾಂಬ ಶಿವರಾವ್, ಜಗದೀಶ್, ಬಿ.ಎಚ್. ರಮೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.