ನಾಳೆ ಬೇಲೂರಿಗೆ ವಿವೇಕಾನಂದ ರಥ ಆಗಮನ; ಅದ್ಧೂರಿ ಸ್ವಾಗತಕ್ಕೆ ಸಿದ್ಧತೆ
ಕ.ಪ್ರ. ವಾರ್ತೆ ಬೇಲೂರು ನ.8
ಪಟ್ಟಣಕ್ಕೆ ನ.10 ರಂದು ವಿವೇಕಾನಂದ ರಥ ಅಗಮಿಸಲಿದ್ದು, ರಥವನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗುತ್ತಿದೆ ವಿವೇಕಾನಂದ ರಥಯಾತ್ರಾ ಸಮಿತಿ ಅಧ್ಯಕ್ಷ ಬಿ.ಕೆ.ಶ್ರೀಹರಿ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ಕ್ಕೆ ಪಟ್ಟಣದ ನೆಹರು ನಗರಕ್ಕೆ ಅಗಮಿಸುತ್ತಿರುವ ರಥ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಸಂಚರಿಸಲಿದ್ದು ಕೋಟೆ ಬಯಲು ರಂಗಮಂದಿರದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ ಎಂದರು.
ಶ್ರೀಸ್ವಾಮಿ ತ್ಯಾಗೀಶ್ವರಾನಂದ ರಾಮಕೃಷ್ಣ, ಸ್ವಾಮಿ ಯುಕ್ತೇಶಾನಂದ, ಸ್ವಾಮಿ ಬುದ್ದಿಯೋಗಾನಂದರವುಕೃಷ್ಣ, ಶಾಸಕ ವೈ.ಎನ್.ರುದ್ರೇಶಗೌಡ, ಸಂಶೋಧಕ ಶ್ರೀವತ್ಸ ಎಸ್.ವಟಿ, ತಾಪಂ ಮಾಜಿ ಅಧ್ಯಕ್ಷ ಕೆ.ಎಸ್.ಲಿಂಗೇಶ್, ಜಿಪಂ ಸದಸ್ಯ ಅಮಿತ್ಕುಮಾರ್ ಶೆಟ್ಟಿ, ಜಿಲ್ಲಾ ಸಂಚಾಲಕ ಶ್ರೀಧರ್ ಉಪಸ್ಥಿತರಿರುವರು. ಸಾರ್ವಜನಿಕರು ಹಾಗೂ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ರಥಯಾತ್ರಾ ಸಮಿತಿ ಸಂಚಾಲಕ ಶ್ರೀನಿಧಿ ಮಾತನಾಡಿ, ಯುವಶಕ್ತಿಯನ್ನು ಜಾಗೃತಿಗೊಳಿಸುವ ಹಿನ್ನೆಲೆಯಲ್ಲಿ ವಿವೇಕಾನಂದ ರಥಯಾತ್ರೆ ಹಮ್ಮಿಕೊಂಡಿದ್ದು, ಇದು ಯಾವುದೇ ರಾಜಕೀಯ ಪಕ್ಷದ ಪರವಾಗಿಲ್ಲ ಎಂದು ಹೇಳಿದರು. ಸಂಚಾಲಕ ಶ್ರೀವತ್ಸ ಎಸ್.ವಟಿ, ಕೃಷ್ಣೇಗೌಡ,ಇಂದಿರಮ್ಮ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

