ಹಾಸನ

ಅಕ್ರಮ ಮರಳು ಸಾಗಾಣಿಕೆ - ಗ್ರಾಮಸ್ಥರ ದೂರು

Published On :

ಸಕಲೇಶಪುರ: ತಾಲೂಕಿನ ಯಸಳೂರು ಹೋಬಳಿಯ ಪಾಲಳ್ಳಿ ಹಾಗೂ ಐಗೂರು ಹೊಳೆಯಲ್ಲಿ  ಭಾರಿ ಪ್ರಮಾಣದ ಅಕ್ರಮ ಮರಳುಗಾರಿಕೆಯಲ್ಲಿ  ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಒಂದು ತಿಂಗಳಿನಿಂದ ಅಹೋರಾತ್ರಿ ಪಾಲಳ್ಳಿ ಹೊಳೆಯಲ್ಲಿ ಜೆಸಿಬಿ ಯಂತ್ರಗಳನ್ನು ಬಳಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದು ಅಧಿಕಾರಿಗಳು ತಿಳಿದು ತಿಳಿಯದಂತೆ ವರ್ತಿಸುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕರಗೂರು ಕೂಡಿಗೆ, ಐಗೂರು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಟ್ಟದಷ್ಟು ಎತ್ತರಕ್ಕೆ ಮರಳು ದಾಸ್ತಾನು ಮಾಡಿ ರಾಜ್ಯದ ಇತರೆ ಕಡೆಗಳಿಗೆ ರಾಜಾರೋಷವಾಗಿ ಸಾಗಿಸುತ್ತಿದ್ದಾರೆ. ಈ ಅಕ್ರಮ ದಂಧೆಯಲ್ಲಿ ಪ್ರಭಾವಿ ವ್ಯಕ್ತಿಗಳಿದ್ದು, ಸಂಬಂಧಪಟ್ಟವರು ಇವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಈ ನಿಟ್ಟಿನಲ್ಲಿ ದಾಳಿ ನಡೆಸುವ ವೇಳೆ ಅಕ್ರಮ ಮರಳುಗಾರಿಕೆ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕ್ರಮ ಜರುಗಿಸಲು ಸಾಧ್ಯವಾಗುತ್ತಿಲ್ಲ ಎಂದು ಯಸಳೂರು ಪಿಎಸ್ಐ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.