ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು
ಹಾಸನ: ಅಪರಿಚಿತ ವಾಹನ ಡಿಕ್ಕಿ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ ಕಸಬಾ ಹೋಬಳಿ ಸತ್ಯಮಂಗಲ ವಾಸಿ ಬೊಮ್ಮೇಗೌಡ (44) ಸಾವನ್ನಪ್ಪಿದ ದುರ್ದೈವಿ.
ಬೊಮ್ಮೇಗೌಡ ರವರು ಟಿವಿಎಸ್ನಲ್ಲಿ ವಿದ್ಯಾನಗರಕ್ಕೆ ಹೋಗಲು ಕೆಎಸ್ಆರ್ಟಿಸಿ ತರಬೇತಿ ಕಾರ್ಯಗಾರ ರಿಂಗ್ ರಸ್ತೆ ಹತ್ತಿರ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ವಾಹನ ಚಾಲಕನ ನಿರ್ಲಕ್ಷತ್ಯೆಯಿಂದ ಬೈಕ್ಗೆ ಡಿಕ್ಕಿ ಮಾಡಿದ ಪರಿಣಾಮ ಬೊಮ್ಮೇಗೌಡಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸಂಬಂಧಿ ಶಿವಣ್ಣ ಹಾಸನ ಸಂಚಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಸ್, ಟ್ಯಾಂಕರ್ಗೆ ಮರಳುಲಾರಿ ಡಿಕ್ಕಿ: ಸಂಚಾರ ಅಸ್ತವ್ಯಸ್ತ
ಆಲೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಮಾವನೂರು ಬಳಿ ಮರಳು ಸಾಗಣೆ ಲಾರಿಯೊಂದು ಬಸ್ ಹಾಗೂ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಸಂಚಾರ ಸ್ಥಗಿತಗೊಂಡ ಘಟನೆ ಶನಿವಾರ ಸಂಜೆ ನಡೆದಿದೆ.
ಸಕಲೇಶಪುರದಿಂದ ಮರಳು ತುಂಬಿಕೊಂಡು ಬಂದಿದ್ದ ಲಾರಿ, ಎದುರಿನಿಂದ ಬಂದ ಬಸ್ಗೆ ಡಿಕ್ಕಿ ಹೊಡೆದ ನಂತರ ನಂತರ ಬಸ್ ಹಿಂಭಾಗ ಬರುತ್ತಿದ್ದ ಖಾಲಿ ಅನಿಲ ಟ್ಯಾಂಕರ್ಗೆ ಗುದ್ದಿ ರಸ್ತೆಯಲ್ಲಿ ಮಗಚಿ ಬಿದ್ದ ಪರಿಣಾಮ 3 ತಾಸುಗಳಿಗೂ ಹೆಚ್ಚು ಕಾಲ ರಸ್ತೆ ತಡೆ ಉಂಟಾಯಿತು. ಭಾರಿ ವಾಹನಗಳನ್ನು ಹೊರತುಪಡಿಸಿ ಲಘು ವಾಹನಗಳನ್ನು ಬದಲಿ ಮಾರ್ಗದಲ್ಲಿ ಕಳುಹಿಸಿಕೊಡಲಾಯಿತು.
ಅನಿಲ ಟ್ಯಾಂಕರ್ ಖಾಲಿ ಇದ್ದ ಪರಿಣಾಮ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ. ಈ ಸ್ಥಳದಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದರೂ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಈಗಾಗಲೇ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದರೂ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
ಆದ್ದರಿಂದ ಶೀಘ್ರ ತಿರುವ ಹಾಗೂ ಇಳಿಜಾರಿರುವ ಈ ರಸ್ತೆಯನ್ನು ನೇರ ರಸ್ತೆಯನ್ನಾಗಿ ಪರಿವರ್ತಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

