ಅರಸೀಕೆರೆಗೆ ವಿವೇಕಾನಂದ ರಥ ಆಗಮನ ನಾಳೆ
ಅರಸೀಕೆರೆ: ಸ್ವಾಮಿ ವಿವೇಕಾನಂದರ 150ನೇ ಜನ್ಮಾಚರಣೆ ಅಂಗವಾಗಿ ದೇಶದಾದ್ಯಂತ ಹೊರಟಿರುವ ರಥಯಾತ್ರೆಯು ನ.11 ರಂದು ಪಟ್ಟಣ ಪ್ರವೇಶಿಸಲಿದ್ದು, ಪೂರ್ಣಕುಂಭ ಸ್ವಾಗತದೊಂದಿಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು ಎಂದು ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಶ್ರೀರಾಮಕೃಷ್ಣ ಮಠ ಮತ್ತು ಶ್ರೀರಾಮಕೃಷ್ಣ ಭಾವ ಪ್ರಚಾರ ಪರಿಷತ್ ಆಶ್ರಯದಲ್ಲಿ ಹೊರಟಿರುವ ಸ್ವಾಮಿ ವಿವೇಕಾನಂದರ ರಥಯಾತ್ರೆ ಮೂಲಕ ಅವರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗಕ್ಕೆ ತಿಳಿಸುವ ಕಾರ್ಯದಲ್ಲಿ ಯುವಕರಲ್ಲಿ ಆತ್ಮ ವಿಶ್ವಾಸ, ರಾಷ್ಟ್ರ ಭಕ್ತಿ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ಉದ್ದೇಶದೊಡನೆ ನಿಯೋಜಿಸಲಾಗಿದೆ. ನ.11 ರಂದು ಸೋಮವಾರ ಬೆಳಿಗ್ಗೆ 9.30 ಕ್ಕೆ ಸರ್ಕಾರಿ ಜೆ.ಸಿ. ಆಸ್ಪತ್ರೆ ಆವರಣದಿಂದ ರಥಯಾತ್ರೆ ಆರಂಭಗೊಂಡು ಬಿ.ಎಚ್.ರಸ್ತೆಯ ಮೂಲಕ ಸಾಧನಾ ಚಿತ್ರಮಂದಿರ ತಲುಪಲಿದೆ. ತದ ನಂತರ ಸಾರ್ವಜನಿಕ ಗ್ರಂಥಾಲಯ ರಸ್ತೆಯಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಾರ್ವಜನಿಕ ಸಭೆಯನ್ನು ಏರ್ಪಡಿಸಲಾಗಿದೆ. ಈ ಮಹತ್ವ ಪೂರ್ಣವಾದ ರಥಯಾತ್ರೆ ಕಾರ್ಯಕ್ರಮದಲ್ಲಿ ವಿವೇಕಾನಂದರ ವೇಷಭೂಷಣ ಧರಿಸಿ ಮೆರವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಅವಕಾಶವಿದ್ದು, ಪಟ್ಟಣದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಬ್ಯಾಂಡ್ಸೆಟ್ಗಳೊಂದಿಗೆ ಹಾಗೂ ನಾನಾ ಜನಪದ ಕಲಾತಂಡಗಳು ಪಾಲ್ಗೊಳ್ಳಲು ಮನವಿ ಮಾಡಲಾಗಿದೆ. ಅಲ್ಲದೆ ವಿಶೇಷವಾಗಿ ಮಹಿಳೆಯರು ಮತ್ತು ಕಾಲೇಜು ವಿದ್ಯಾರ್ಥಿನಿಯರು ಪೂರ್ಣಕುಂಭದೊಡನೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಕಾರ್ಯಕ್ರಮದ ಸ್ಥಳದಲ್ಲಿ ಸ್ವಾಮಿ ವಿವೇಕಾನಂದರ ಪುಸ್ತಕಗಳು, ಸಿ.ಡಿ. ಭಾವಚಿತ್ರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

