ಕಾನೂನು ಉಲ್ಲಂಘನೆ ವಿರುದ್ಧ ಜನತೆ ಎಚ್ಚೆತ್ತುಕೊಳ್ಳಬೇಕು
ಕ.ಪ್ರ.ವಾರ್ತೆ ಹಾಸನ ನ. 9
ಸಮಾಜದಲ್ಲಿ ಕಾನೂನು ಉಲ್ಲಂಘನೆಯಾಗುವಂತ ಕಾರ್ಯಗಳ ವಿರುದ್ಧ ಸಾರ್ವಜನಿಕರು ಎಚ್ಚೆತ್ತುಕೊಂಡು, ಸಮಾಜಮುಖಿ ಕೆಲಸದಲ್ಲಿ ತೊಡಗಬೇಕು. ಕಾನೂನು ಬಾಹಿರವಾಗಿ ವರ್ತಿಸುವವರ ವಿರುದ್ಧ ಜಾಗೃತಿ ಮೂಡಿಸಿ ದುಷ್ಟ ಪರಿಣಾಮಗಳನ್ನು ತಡೆಗಟ್ಟಬೇಕು ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸುಲಜ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಶನಿವಾರ ನಡೆದ ಕಾನೂನು ಅರಿವು ಮತ್ತು ನೆರವು ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಸಮಾಜದಲ್ಲಿ ಅನಾಹುತಗಳು ಹೆಚ್ಚಾಗುತ್ತಿದ್ದು, ಅದನ್ನು ತಪ್ಪಿಸಲು ಸಾರ್ವಜನಿಕರಿಗೆ ಕಾನೂನಿನ ಅರಿವು ಅತ್ಯಗತ್ಯ ಎಂದು ಹೇಳಿದರು.
ಪ್ರತಿ ವ್ಯಕ್ತಿಗೂ ಕಾನೂನಿನ ಅರಿವು ಮತ್ತು ನೆರವು ಬಹಳ ಮುಖ್ಯ. ಸಾರ್ವಜನಿಕರಲ್ಲಿ ಕಾನೂನಿನ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಉದ್ದೇಶವಾಗಿದ್ದು, ಸಂವಿಧಾನದ ಪ್ರಕಾರ ಯಾವುದೇ ಬೇಧ ಭಾವವಿಲ್ಲದೆ ಎಲ್ಲರಿಗೆ ಸಮಾನವಾದ ಕಾನೂನಿನ ಸೇವೆಯನ್ನು ನೀಡಲಾಗುತ್ತದೆ. ಆರ್ಥಿಕವಾಗಿ ಹಿಂದುಳಿದೆ ಪರಿಶಿಷ್ಟ ಜಾತಿ ಹಾಗೂ ಪಂಗಡವವರಿಗೆ ಉಚಿತ ಕಾನೂನು ಸೇವೆ ನೀಡುವ ಮೂಲಕ ಎಲ್ಲರಿಗೆ ಸಮಾನ ಕಾನೂನು ಸೇವೆಯನ್ನು ಒದಗಿಸುವ ಮೂಲಕ ಯಾರು ಕಾನೂನಿನಿಂದ ವಂಚಿತರಾಬಾರದು ಎಂದರು.
ಇತ್ತೀಚೆಗೆ ನ್ಯಾಯಾಲಯದಲ್ಲಿ ಪ್ರಕರಣಗಳ ವಿಲೇವಾರಿ ಶೀಘ್ರಗೊಳಿಸುವ ಹಿನ್ನೆಲೆಯಲ್ಲಿ ಬೃಹತ್ ಲೋಕ ಅದಾಲತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ 46,325 ಪ್ರಕರಣಗಳಿದ್ದು, ಈ ಪೈಕಿ ಸುಮಾರು 10 ಸಾವಿರ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತಹ ಗುರಿಯನ್ನು ಹೊಂದಲಾಗಿದೆ. ಈಗಾಗಲೇ 3 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.
ಬಾಕಿ ಉಳಿದಿರುವಂತಹ ಪ್ರಕರಣಗಳ ಶೀಘ್ರ ವಿಲೇವಾರಿಯಾಗಬೇಕಾದರೆ ಸಾರ್ಜಜನಿಕರ ಕಾನೂನಿನ ಅರಿವು ಬಹಳ ಮುಖ್ಯ ಎಂದ ಅವರು, ಬಾಲ್ಯ ವಿವಾಹದ ವಿರುದ್ಧ ಎಚ್ಚೆತ್ತುಕೊಂಡು ಅರಿವು ಮೂಡಿಸುವ ಮೂಲಕ ಬಾಲ್ಯ ವಿವಾಹ ಪದ್ಧತಿಯನ್ನು ತಡೆಗಟ್ಟುವಂತೆ ಕರೆ ನೀಡಿದರು.
ನ್ಯಾ. ಆರ್.ಡಿ.ಹುದ್ದಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮುಸ್ತಫ ಹುಸೇನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೇವರಾಜೇಗೌಡ, ಸುಜಲ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಿ.ಸುಬ್ಬೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

