ಜಿಲ್ಲೆಯ ಸಮಗ್ರ ಅಭಿವೃದ್ಧಿ ಕನಸು ಇನ್ನೂ ನನಸಾಗಿಲ್ಲ: ದೇವೇಗೌಡ
ಕ.ಪ್ರ.ವಾರ್ತೆ ಬೇಲೂರು ನ.9
ಕಳೆದ 60 ವರ್ಷಗಳ ರಾಜಕೀಯ ಜೀವನದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕನಸು ಕಂಡಿದ್ದು, ಇನ್ನೂ ನನಸಾಗಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿಷಾದಿಸಿದರು.
ತಾಲೂಕಿನ ದಬ್ಬೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಪ ಚುನಾವಣೆಗಳಲ್ಲಿ ಸೋಲು ನೋವುಂಟು ಮಾಡಿದ್ದು, ಲೋಕಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾಗ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಬಾರದೆಂಬ ಭಾವನೆಯಿಂದ ನನ್ನ ಸ್ಥಾನವನ್ನು ಉಳಿಸಿಕೊಳ್ಳುವ ಅನಿವಾರ್ಯತೆ
ಬಂದೊದಗಿತು ಎಂದರು.
ರಾಜಕೀಯ ಕ್ಷೇತ್ರದಲ್ಲಿ ಹಲವರು ದೇವೇಗೌಡನನ್ನು ಏಣಿಯಾಗಿ ಬಳಿಸಿ ಅಧಿಕಾರ ಅನುಭವಿಸಿ ನನ್ನ ಮೇಲೆ ಸಲ್ಲದ ಆರೋಪ ಮಾಡಿದ್ದಾರೆ. ತಾವು ಎಲ್ಲಾ ವರ್ಗದವರಿಗೂ ಅಧಿಕಾರ ಸಿಗುವಂತೆ ಮಾಡಿದೆ. ಅದರಂತೆ ಸಕಲೇಶಪುರದ ಬಿ.ಆರ್. ಗುರುದೇವ್, ಎಚ್.ಎಂ.ವಿಶ್ವನಾಥ್, ಬೇಲೂರು ಕೃಷ್ಣಮೂರ್ತಿ, ಅಣ್ಣೇಚಾಕೇನಹಳ್ಳಿ ದೊಡ್ಡೇಗೌಡರನ್ನು ಶಾಸಕರಾಗಿ ಮಾಡಿದ್ದು ನನ್ನ ತಪ್ಪೇ ಎಂದು ಪ್ರಶ್ನಿಸಿದರು.
ಮೂಡಿಗೆರೆ ಶಾಸಕ ಬಿ.ಬಿ.ನಿಂಗಯ್ಯ ಮಾತನಾಡಿ, ಹಾಸನ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದೇವೇಗೌಡರ ಕೊಡುಗೆ ಅಪಾರವಾಗಿದ್ದು, ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದನೆಯಲ್ಲಿ ಜಿಲ್ಲೆ ಕ್ರಾಂತಿ ಮಾಡಿದ್ದು, ಗೌಡರ ಕೊಡುಗೆ. ರಾಷ್ಟ್ರ ರಾಜಕಾರಣಕ್ಕೆ ದೇವೇಗೌಡರು ಅನಿವಾರ್ಯವಾಗಿದ್ದು, ಜಿಲ್ಲೆಯ ಜನತೆ ದೇವೇಗೌಡರನ್ನು ಮತ್ತೊಮ್ಮೆ ಲೋಕಸಭೆಗೆ ಆರಿಸಿ ಕಳುಹಿಸುವಂತೆ ಕೋರಿದರು.
ಜಂಟಿ ನಿವೃತ್ತ ನಿಬಂಧಕ ಹಿಮವಂತ ಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ಗಿರೀಶ್, ಜಿಲ್ಲಾ ಪಂಚಾಯ್ತಿ ಸದಸ್ಯ ಬಿ.ಡಿ.ಚಂದ್ರೇಗೌಡ, ಜಿ.ಟಿ.ಇಂದಿರಾ, ತಾಲೂಕು ಪಂಚಾಯ್ತಿ ಅಧ್ಯಕ್ಷ ಸುಮಿತ್ರ, ಸದಸ್ಯ ಪದ್ಮಾಕ್ಷಿ, ದಬ್ಬೆ ಗ್ರಾಪಂ ಅಧ್ಯಕ್ಷ ಶೇಷಮ್ಮ, ಜೆಡಿಎಸ್ ಮುಖಂಡರಾದ ರಮೇಶ್, ಎಂ.ಎ.ನಾಗರಾಜು, ತೊ.ಚ.ಅನಂತಸುಬ್ಬರಾಯ, ಸಹಕಾರ ಸಂಘದ ಅಧ್ಯಕ್ಷ ಬಿ.ಕೆ.ಕುಮಾರ್, ಕಾರ್ಯನಿರ್ವಾಹಣಾಧಿಕಾರಿ ಕೆ.ಪಿ.ಜಗದೀಶ್, ಸಹಕಾರ ಅಭಿವೃದ್ಧಿ ಅಧಿಕಾರಿ ಕೆ.ದೇವರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

