ಪಟ್ಟಣದ ಅಭಿವೃದ್ಧಿಗೆ ಶ್ರಮ: ಮೋಹನ್ ಕುಮಾರ್
ಅರಸೀಕೆರೆ: ತಮ್ಮ ಅಧಿಕಾರಾವಧಿಯಲ್ಲಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಶ್ರಮ ವಹಿಸುವುದಾಗಿ ಪುರಸಭೆ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು.ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಛತೆ, ನೀರು ಸರಬರಾಜು ಪೂರೈಕೆ, ಬೀದಿದೀಪ, ರುದ್ರಭೂಮಿಗಳ ಅಭಿವೃದ್ಧಿ, ಪುರಸಭೆಯ ಮೀಸಲಾತಿ ನಿಧಿ, ಒಳಚರಂಡಿ ವ್ಯವಸ್ಥೆ, ನಗರೋತ್ಥಾನ, ಮನೆಗಂದಾಯ, ಇತ್ಯಾದಿ ವಿಷಯಗಳ ಬಗ್ಗೆ ನಿಗಾ ವಹಿಸಲಾಗಿದ್ದು ಸಾರ್ವಜನಿಕರಿಗೆ ಕಿರಿಕಿರಿ ಆಗದಂತೆ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು.ಪಟ್ಟಣದಲ್ಲಿ 27 ವಾರ್ಡುಗಳಿದ್ದು, ಈಗಾಗಲೇ ಜನಸಂಖ್ಯೆ ಸುಮಾರು 50 ಸಾವಿರ ದಾಟಿದೆ. ಜನರ ಮೂಲಭೂತ ಸೌಕರ್ಯಗಳನ್ನು ಈಡೇರಿಸಬೇಕಾಗಿರುವ ಜವಾಬ್ದಾರಿ ಚುನಾಯಿತ ಜನಪ್ರತಿಗಳಾದ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು.ಬಿಡಾಡಿ ದನಗಳು, ಬೀದಿ ನಾಯಿಗಳು ಹಾಗೂ ಹಂದಿಗಳ ಉಪಟಳ ತಪ್ಪಿಸಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಬೀದಿಗೆ ಬಿಟ್ಟಿರುವ ಜಾನುವಾರುಗಳನ್ನು ಹಿಡಿದು ಗೋಶಾಲೆಗೆ ಕಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಮೀವುಲ್ಲಾ, ಸದಸ್ಯರಾದ ಪಂಚಾಕ್ಷರಿ, ಗಯಾಸುದ್ಧೀನ್, ಸುರೇಶ್, ಫೈರೋಜ್, ನಾಜಿಮಾ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

