ಅಶ್ಲೀಲ ಡಿವಿಡಿ ಮಾರಾಟ: 4 ಬಂಧನ
ಕನ್ನಡಪ್ರಭ ವಾರ್ತೆ ಅರಸೀಕೆರೆ ನ 9
ಅರಸೀಕೆರೆ ಪಟ್ಟಣದ ನಾನಾ ಕಡೆ ಅಕ್ರಮವಾಗಿ ನಕಲಿ ಡಿವಿಡಿಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿ ಈ ಸಂಬಂಧ ನಾಲ್ವರನ್ನು ಬಂಧಿಸಿ, 4 ಸಾವಿರ ರು.ಬೆಲೆಯ ಡಿವಿಡಿಗಳನ್ನು ಶುಕ್ರವಾರ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಪಟ್ಟಣದ ಬಿ.ಎಚ್. ರಸ್ತೆಯಲ್ಲಿರುವ ಪ್ರೆಂಡ್ಸ್ ಡಿವಿಡಿ ಪ್ಲಾಜಾ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಶ್ಲೀಲ ಡಿವಿಡಿ ಗಳನ್ನು ಮಾರಾಟ ಮಾಡುತ್ತಿದ್ದಾಗ ಪಿಎಸ್ಐ ನಂದಕುಮಾರ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ಮಾಡಿ ಅಂಗಡಿ ನವೀನ್ (20) ನ್ನು ಬಂಧಿಸಿದರು. ಅಂಗಡಿಯಲ್ಲಿಟ್ಟಿದ್ದ ಸುಮಾರು 500 ರು. ಬೆಲೆಯ ನಕಲಿ ಡಿವಿಡಿ ಡಿಸ್ಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪಟ್ಟಣದ ಬಿ.ಎಂ.ರಸ್ತೆಯಲ್ಲಿರುವ ಶಾಹೀದ್ ಡಿವಿಡಿ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಅಶ್ಲೀಲ ಡಿವಿಡಿ ಗಳನ್ನು ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪಿಎಸ್ಐ ಐಣ್ಣಯ್ಯಗೌಡರು ಅಂಗಡಿ ಮೇಲೆ ದಾಳಿ ನಡೆಸಿ ಸುನ್ನಿಚೌಕದ ಖಾದರ್ (27) ಎಂಬಾತನನ್ನು ಬಂಧಿಸಿದ್ದು, ಅಂಗಡಿಯಲ್ಲಿಟ್ಟದ್ದ ಸುಮಾರು 1200 ರು. ಬೆಲೆಯ ಡಿವಿಡಿ ಡಿಸ್ಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಪಟ್ಟಣದ ಮಟನ್ ಮಾರ್ಕೆಟ್ ರಸ್ತೆಯಲ್ಲಿರುವ ಶಾಹೀದ್ ಡಿವಿಡಿ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಹಣ ಸಂಪಾದನೆಗಾಗಿ ಅಶ್ಲೀಲ ಡಿವಿಡಿ ಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಪಿಎಸ್ಐ ಐಣ್ಣಯ್ಯಗೌಡಗೆ ಬಂದ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿ ಟಿಪ್ಪುನಗರದ ಇಸ್ಮಾಯಿಲ್ (40) ಎಂಬಾತನನ್ನು ಬಂಧಿಸಿದ್ದು, ಅಂಗಡಿಯಲ್ಲಿಟ್ಟದ್ದ ಸುಮಾರು 1400 ರು. ಬೆಲೆಯ ಡಿವಿಡಿ ಡಿಸ್ಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪಟ್ಟಣದ ಬಿ.ಎಚ್.ರಸ್ತೆ ಸಂಗೀತ ಡಿವಿಡಿ ಅಂಗಡಿಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಹಣ ಸಂಪಾದನೆಗಾಗಿ ಅಶ್ಲೀಲ ಡಿವಿಡಿ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಪಿಐ ನಂದಕುಮಾರ್ಗೆ ಬಂದ ಮಾಹಿತಿ ಮೇರೆಗೆ ದಾಳಿ ನಡೆಸಿ ಶ್ಯಾನುಬೋಗರ ಬೀದಿಯ ಅಶ್ವಥ್ ನಾರಾಯಣ (55) ಎಂಬಾತನನ್ನು ಬಂಧಿಸಿದ್ದು, ಅಂಗಡಿಯಲ್ಲಿ ಇಟ್ಟದ್ದ ಸುಮಾರು 900 ರು. ಬೆಲೆಯ ಡಿವಿಡಿ ಡಿಸ್ಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

