ಆದ್ಧೂರಿ ಕನಕ ಜಯಂತಿಗೆ ನಿರ್ಧಾರ
ಕ.ಪ್ರ.ವಾರ್ತೆ ಅರಸೀಕೆರೆ ನ.9
ನ.20 ರಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಲಿರುವ ಕನಕ ಜಯಂತಿ ಕಾರ್ಯಕ್ರಮವನ್ನು ಕುರುಬ ಸಮಾಜ ಬಾಂಧವರ ಜತೆ ಸೇರಿ ಅದ್ಧೂರಿಯಾಗಿ ಆಚರಿಸಲು ಶಾಸಕ ಕೆ.ಎಂ.ಶಿವಲಿಂಗೇಗೌಡರ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಶುಕ್ರವಾರ ಸಂಜೆ ಕರೆಯಲಾಗಿದ್ದ ಕನಕ ಜಂಯತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ಹಾಗೂ ಕ್ರಾಂತಿಯೋಗಿ ಬಸವಣ್ಣ ಹಾಗೂ ಕನಕದಾಸರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲಾ ಧರ್ಮ ಮತ್ತು ಜಾತಿ ಜನಾಂಗದವರು ಒಟ್ಟಿಗೆ ಸೇರಿ ಅತ್ಯಂತ ಅರ್ಥಪೂರ್ಣವಾಗಿ ವೈಭವದಿಂದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮೂಲಕ ನಡೆಸಬೇಕೆಂದು ಸಲಹೆ ನೀಡಿದರು.
ನ.20 ರ ಬುಧವಾರ ನಡೆಯಲಿರುವ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಸ್ಥಳೀಯ ಕುರುಬ ಸಮಾಜದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
ಅಂದು ಬೆಳಗ್ಗೆ 10 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಆವರಣದಿಂದ ಕನಕದಾಸರ ಭಾವಚಿತ್ರದ ಮೆರವಣಿಗೆಯನ್ನು ಬಿ.ಎಚ್.ರಸ್ತೆ, ಪಿ.ಪಿ.ವೃತ್ತಕ್ಕೆ ಬಂದು ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಸಾಯಿನಾಥ ರಸ್ತೆಯಿಂದ ಪೇಟೆಬೀದಿ ಮುಖಾಂತರ ಬಿ.ಎಚ್.ರಸ್ತೆಯ ಮಾರ್ಗವಾಗಿ ಬಸವರಾಜೇಂದ್ರ ಪ್ರೌಢಶಾಲಾ ಆವರಣದಲ್ಲಿ ನಿರ್ಮಿಸಿರುವ ಸಭಾ ವೇದಿಕೆಗೆ ಆಗಮಿಸಲು ಸಭೆಯಲ್ಲಿ ನಿಶ್ಚಯಿಸಲಾಯಿತು.
ಮೆರವಣಿಗೆಯನ್ನು ಅತ್ಯಂತ ಆಕರ್ಷಣೆಗೊಳಿಸುವ ಸಲುವಾಗಿ ವಿವಿಧ ಜಾನಪದ ಕಲಾ ತಂಡಗಳು ಮತ್ತು ಸ್ತಬ್ಧ ಚಿತ್ರಗಳನ್ನು ಆಯೋಜಿಸಲು ಮತ್ತು ವೇದಿಕೆಯಲ್ಲಿ ನಿವೃತ್ತ ಉಪ ನಿರ್ದೇಶಕ ಹಾಗೂ ಸಮಾಜದ ಮುಖಂಡ ನಿಂಗಪ್ಪ ಅವರಿಂದ ಉಪನ್ಯಾಸ ಕಾರ್ಯಕ್ರಮ ಹಾಗೂ ಸಮಾಜದ ಪ್ರತಿಭಾನ್ವಿತ ವ್ಯಕ್ತಿಗಳಿಗೆ ಮತ್ತು ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ತಹಸೀಲ್ದಾರ್ ಕೇಶವಮೂರ್ತಿ, ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ಪುರಸಭೆ ಅಧ್ಯಕ್ಷ ಮೋಹನ್ಕುಮಾರ್ ಉಪಾಧ್ಯಕ್ಷೆ ಭಾಗ್ಯಲತಾ, ತಾಪಂ ಇಓ ಟಿ.ಎನ್.ಮೂರ್ತಿ, ಡಿವೈಎಎಸ್ಪಿ ಮಂಜುನಾಥ್, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಟಿ.ಆರ್.ಕೃಷ್ಣಮೂರ್ತಿ, ಸಂಗೊಳ್ಳಿರಾಯಣ್ಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ.ಚಂದ್ರಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ಅಶೋಕ್ ಇನ್ನಿತರ ಮುಖಂಡರು, ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

