ಹಾಸನ

ನಾಳೆ ವಾರ್ಷಿಕ ವಿಶೇಷ ಶಿಬಿರ

Published On :

ಹೊಳೆನರಸೀಪುರ: ತಾಲೂಕಿನ ಪಡುವಲಹಿಪ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಹಳೇಕೋಟೆ ಹೋಬಳಿಗೆ ಸೇರಿದ ಚಾಕೇನಹಳ್ಳಿ ಗ್ರಾಮದಲ್ಲಿ ನ.11ರಿಂದ ವಾರ್ಷಿಕ ವಿಶೇಷ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ  ಕೆ.ಎಚ್.ಯೋಗಣ್ಣ ತಿಳಿಸಿದ್ದಾರೆ. ಶಾಸಕ ಎಚ್.ಡಿ.ರೇವಣ್ಣ ಶಿಬಿರ ಉದ್ಘಾಟಿಸಲಿದ್ದು, ಧ್ವಜಾರೋಹಣವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ  ಎನ್.ರಾಜಮ್ಮ ನೆರವೇರಿಸುವರು. ಏಳು ದಿನ ನಡೆಯಲಿರುವ ಈ ಶಿಬಿರದಲ್ಲಿ ಗ್ರಾಮದಲ್ಲಿನ ಚರಂಡಿ ನಿರ್ಮಾಣ ಮತ್ತು ದುರಸ್ತಿ, ರಸ್ತೆ ನಿರ್ಮಾಣ ದೇವಾಲಯದ ಪರಿಸರದ ಸ್ವಚ್ಛತೆ ಜಾನುವಾರು ತಪಾಸಣೆ, ವೈದ್ಯಕೀಯ ತಪಾಸಣೆ, ಇಂಗು ಗುಂಡಿಗಳ ತಪಾಸಣೆ, ಸಾಕ್ಷರತೆ ಮತ್ತು ಏಡ್ಸ್ ಜಾಗೃತಿ, ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ, ಉದ್ಯೋಗ ಮಾಹಿತಿ ಹಾಗೂ ಅಂತರ್ಜಲ ಮತ್ತು ಅರಣ್ಯ ಸಂರಕ್ಷಣೆಯ ಕುರಿತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಎನ್ಎಸ್ಎಸ್ ಘಟಕದ ಶಿಭಿರಾಧಿಕಾರಿ ಕೆ.ಸಿ.ಸತೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.