'ಸತ್ಯ, ನಿಸ್ವಾರ್ಥತೆಯಿಂದ ಬದುಕು ಸುಂದರ'
ಕನ್ನಡಪ್ರಭ ವಾರ್ತೆ ಸಕಲೇಶಪುರ ನ.9
ಯಾರು ಸತ್ಯ, ಪಾವಿತ್ರ್ಯತೆ ಮತ್ತು ನಿಸ್ವಾರ್ಥತತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೊ ಅಂತಹ ವ್ಯಕ್ತಿಗಳು ಜೀವನದಲ್ಲಿ ಅತ್ಯದ್ಭುತವಾಗಿ ಬದುಕುತ್ತಾರೆಂದು ರಮೇಶ್ಕುಂಬ್ರಾಣಿ ಅವರು ಹೇಳಿದರು.
ಸ್ವಾಮಿ ವಿವೇಕಾನಂದರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಶ್ರೀ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಭಾವ ಪ್ರಚಾರ ಪರಿಷತ್ ವತಿಯಿಂದ ಪಟ್ಟಣದ ಪುರಭವನದಲ್ಲಿ ಶನಿವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ರಥಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತದ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ತುಂಬಾ ಕೆಳದರ್ಜೆಯಲ್ಲಿದ್ದು, ಇದರಿಂದ ದೇಶದ ವಿದ್ಯಾರ್ಥಿಗಳು ನೈತಿಕ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ದೇಶದಲ್ಲಿರುವ ಸಮಸ್ಯೆಗೆ ಪರಿಹಾರವೆಂದರೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಂಡರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಏಳಿಗೆ ಸಾಧ್ಯ ಎಂದು ನುಡಿದರು.
ರಾಮಕೃಷ್ಣ ಮಠದ ಸ್ವಾಮಿ ತ್ಯಾಗೇಶ್ವರನಂದ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಕರಿಗೆ ತಿಳಿಸುತ್ತಾ ಅವರಲ್ಲಿ ಆತ್ಮ ವಿಶ್ವಾಸ, ದೇಶಭಕ್ತಿ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ಉದ್ದೇಶದಿಂದ ರಥಯಾತ್ರೆಯನ್ನು ರಾಜಾದ್ಯಾಂತ ಹಮ್ಮಿಕೊಳ್ಳಲಾಗಿದ್ದು ಈಗಾಗಲೇ ರಾಜ್ಯದ 24 ಜಿಲ್ಲೆಗಳಲ್ಲಿ ಈ ರಥ ಸಂಚರಿಸಿದ್ದು ಇಂದು ಸಕಲೇಶಪುರಕ್ಕೆ ರಥ ಕಾಲಿಡುವ ಮೂಲಕ 25 ನೇ ಜಿಲ್ಲೆ ಹಾಸನಕ್ಕೆ ಕಾಲಿಟ್ಟಂತಾಗಿದೆ ಎಂದು ಹೇಳಿದರು.
ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ರಾಜಬೀದಿಯಲ್ಲಿ ಸಂಚರಿಸಿ ಪುರಭವನದಲ್ಲಿ ಸಭಾ ಕಾರ್ಯಕ್ರಮಕ್ಕೆ ಸೇರುವುದರೊಂದಿಗೆ ಕಾರ್ಯಕ್ರಮ ಅಂತ್ಯಗೊಂಡಿತು. ವಿದ್ಯಾರ್ಥಿಗಳು, ನಾನಾ ಸಂಘ ಸಂಸ್ಥೆಗಳ ಮುಖಂಡರು, ಜಾನಪದ ನೃತ್ಯ ತಂಡ, ಡೋಲು ವಾದ್ಯ ವೃಂದದ ತಂಡಗಳು ಭಾಗವಹಿಸಿದ್ದವು. ಪುರಭವನದಲ್ಲಿ ವಿವೇಕಾನಂದರ ಭಿತ್ತಿ ಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮ ಸಂಯೋಜಕ ನರೇಶ್, ಸ್ವಾಗತ ಸಮಿತಿ ಅಧ್ಯಕ್ಷ ನಂದಿಕೃಪ ರಾಜು, ಪುರಸಭೆ ಅಧ್ಯಕ್ಷ ಸತೀಶ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜೈ ಭೀಮು ಮಂಜು, ಪುರಸಭಾ ಸದಸ್ಯ ವೆಂಕಟೇಶ್, ಸಂತೋಷ್ ಜೈನ್, ಜಾನಪದ ಪರಿಷತ್ನ ಎಂ.ಪಿ ಹರೀಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

