ಇಂದು ಕಾಂಗ್ರೆಸ್ ಜನವಿರೋಧಿ ನೀತಿ ವಿರುದ್ಧ ಕೆಜೆಪಿ ಪ್ರತಿಭಟನೆ
ಕ.ಪ್ರ. ವಾರ್ತೆ ಬೇಲೂರು ನ.10
ಕಾಂಗ್ರೆಸ್ಸ್ರ್ಕಾರದ ಜನವಿರೋಧಿ ನೀತಿ ಖಂಡಿಸಿ ನ. 11 ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೆಜೆಪಿ ಕಾರ್ಯದರ್ಶಿ ಕೊರಟಿಕೆರೆ ಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಾದಿಭಾಗ್ಯ ಯೋಜನೆಯನ್ನು ಎಲ್ಲಾ ವರ್ಗದವರಿಗೂ ವಿಸ್ತರಿಸುವಂತಾಗಬೇಕು ಎಂದರು. ಶಾದಿಭಾಗ್ಯ ಯೋಜನೆ ಮೂಲಕ ಜನತೆಯಲ್ಲಿ ವೈಮನಸ್ಸು ಹುಟ್ಟುಹಾಕಲು ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಯಾವುದೇ ಯೋಜನೆ ಜಾರಿಗೆ ತಂದರೂ ಅವು ಎಲ್ಲಾ ವರ್ಗದವರಿಗೂ ಆಪ್ಯಾಯಮಾನವಾಗಿರುತ್ತಿದ್ದವು. ಸಂಧ್ಯಾ ಸುರಕ್ಷಾ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ವೃದ್ಧಾಪ್ಯ ವೇತನ, ಹಾಲಿನ ಸಹಾಯಧನ ಸೇರಿದಂತೆ ಹತ್ತು ಹಲವಾರು ಯೋಜನೆಗಳು ರಾಜ್ಯದ ಎಲ್ಲಾ ಸಮುದಾಯ ವರ್ಗದವರಿಗೆ ತುಲುಪಿವೆ. ಆದರೆ ಕೇವಲ ಮತಬ್ಯಾಂಕಿಗಾಗಿ ಕಾಂಗ್ರೆಸ್ ಶಾದಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಇದರಿಂದ ಇತರೆ ವರ್ಗದಲ್ಲಿರುವ ಕಡು ಬಡವರು ಯಾವ ಅನ್ಯಾಯ ಮಾಡಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾರ್ವಜನಿಕವಾಗಿ ತಿಳಿಸಬೇಕು ಎಂದು ಒತ್ತಾಯಿಸಿದರು. ಕೆಜೆಪಿ ಮುಖಂಡ ಕನಾಯಕನ ಹಳ್ಳಿ ಮಹದೇವ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಯಲಿರುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು. ಕೆಜೆಪಿ ಮುಖಂಡ ಲಕ್ಷ್ಮೀಶ, ಮಲ್ಲಿಕ್, ಸುಲೈಮಾನ್, ರಮೇಶ್, ಅಣ್ಣೇಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

