ಹಾಸನ

ಗೆಳೆಯರ ಬಳಗದ ರಾಜ್ಯೋತ್ಸವ

Published On :

ಜಾವಗಲ್: ಜಾವಗಲ್ನ ಬಿಸಿಸಿ ಗೆಳೆಯರ ಬಳಗದ ವತಿಯಿಂದ ನ. 25 ಮತ್ತು 26 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.  ಇತ್ತೀಚೆಗೆ ಬಳಗದ ವತಿಯಿಂದ ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಅಧ್ಯಕ್ಷರಾಗಿ ಜೆ.ಜಿ. ಧರ್ಮೇಂದ್ರ ಗೌರವಾಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿ ಜಗನ್ನಾಥ, ಖಜಾಂಚಿಯಾಗಿ ಎಲ್.ಆರ್. ರಮೇಶ್, ಕಾರ್ಯಾಧ್ಯಕ್ಷ ಜೆ.ಸಿ. ನಾಗೇಶ, ಸಂಘಟನಾ ಕಾರ್ಯದರ್ಶಿಗಳಾಗಿ ಲೋಹಿತ್ ಪ್ರಶಾಂತ್, ಪುಟ್ಟೇಗೌಡ, ಸಂಚಾಲಕರಾಗಿ ವಿಶ್ವನಾಥ, ಲೋಕೇಶ, ಕೃಷ್ಣಮೂರ್ತಿ, ಲೋಕೇಶ ಬಾಬು, ಉಮೇಶ್ ಅವರುಗಳನ್ನು ಆಯ್ಕೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.