ಇಂದು ಭವಿಷ್ಯ ನಿಧಿ ಅದಾಲತ್
ಹಾಸನ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ, ಶ್ರಮ ಮಂತ್ರಾಲಯ, ಭಾರತ ಸರ್ಕಾರ ತನ್ನ ಉಪ ಕ್ಷೇತ್ರೀಯ ಕಚೇರಿಯನ್ನು ಯಶೋರಾಮ್ ಚೇಂಬರ್ಸ್, ರತ್ನಗಿರಿ ರಸ್ತೆ, ಚಿಕ್ಕಮಗಳೂರಿನಲ್ಲಿ ಹೊಂದಿದೆ. ಕ್ಷೇತ್ರೀಯ ಭವಿಷ್ಯನಿಧಿ ಆಯುಕ್ತರು ನ. 11ರಂದು ಭವಿಷ್ಯನಿಧಿ ಅದಾಲತ್ ಹಮ್ಮಿಕೊಂಡಿದೆ. ಭವಿಷ್ಯನಿಧಿ ಉದ್ಯೋಗದಾತರು ಮತ್ತು ಸದಸ್ಯರು ತಮ್ಮ ದೂರುಗಳೇನಾದರೂ ಇದ್ದಲ್ಲಿ ಖುದ್ದಾಗಿ ನವೆಂಬರ್ 11ರ ಬೆಳಗ್ಗೆ 11 ಕ್ಕೆ ನೊಂದಾಯಿಸಲು ಕೋರಿದ್ದಾರೆ. ಸದಸ್ಯರು ಹಾಗೂ ಉದ್ಯೋಗದಾತರು ಢಿಢಿಢಿ.ಜಠಜ್ಝ್ಜಿಟಡ.್ಜ್ಟಢ.್ಝಟಿ ಇಲ್ಲಿ ತಮ್ಮ ದೂರುಗಳನ್ನು ನೊಂದಾಯಿಸಬಹುದು. ನೊಂದಾಯಿಸಿದ ದೂರುಗಳನ್ನು 30 ದಿನಗಳೊಳಗೆ ಇತ್ಯರ್ಥ ಮಾಡಿಕೊಡುವಂತೆ ಕ್ರಮ ಕೈಗೊಳ್ಳಲಾಗುತ್ತದೆ.ಭವಿಷ್ಯನಿಧಿ ಮೊತ್ತವನ್ನು ಸದಸ್ಯರ ಖಾತೆಗೆ 24 ಗಂಟೆಯೊಳಗೆ ಜಮಾ ಮಾಡಲು ಹೊಸದಾಗಿ ಃಊಋಖಿಣಈಇಖ ಸೌಲಭ್ಯವನ್ನು ಒದಗಿಸಲಾಗಿದೆ.
ಆದ್ದರಿಂದ ಎಲ್ಲಾ ಸದಸ್ಯರು ತಮ್ಮ ಅರ್ಜಿ ಜೊತೆಗೆ ತಮ್ಮ ಬ್ಯಾಂಕ್ ಪುಸ್ತಕದ ನಕಲು ಪ್ರತಿಯನ್ನು ಲಗತ್ತಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಹಕ ಸೇವಾ ಕೇಂದ್ರವನ್ನು ಸಂಪರ್ಕಿಸಬಹುದು. ದೂರವಾಣಿ 08262-234106, ಫ್ಯಾಕ್ಸ್ 08262-237426, ಇ-ಮೇಲ್ ಡ್ಠ್ಟ. ಝಛ್ಝ್ಞಛಟಛ್ಜಛಟ್ಡ್ಠಣ ಜಠಜ್ಝಿಟಿಜ್ಝಛ.್ಜ್ಟಢ.್ಝಟಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

