ಹಾಸನ

ಪ್ರತಿಯೊಬ್ಬರಲ್ಲೂ ಆರ್ಥಿಕ ಸಾಕ್ಷರತೆ ಅಗತ್ಯ: ಮಂಗಳಾ

Published On :

ಅರಕಲಗೂಡು: ದೇಶದ ಅಭಿವೃದ್ಧಿಯಲ್ಲಿ ಪ್ರತಿ ಪ್ರಜೆಯ ಜವಾಬ್ದಾರಿಯೂ ಇದ್ದು, ಈ ನಿಟ್ಟನಲ್ಲಿ ದೇಶದ ಪ್ರತಿ ಪ್ರಜೆಯೂ ದೇಶದ ಆರ್ಥಿಕ ಸಾಕ್ಷರತೆ ಹೊಂದಿರಬೇಕೆಂದು ಹಾಸನ ನಬಾರ್ಡ್ನ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಮಂಗಳ ತಿಳಿಸಿದರು.
 ತಾಲೂಕಿನ ಹುಲಿಕಲ್ಲು ಗ್ರಾಮದಲ್ಲಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ವತಿಯಿಂದ ಏರ್ಪಡಿಸಲಾಗಿದ್ದ ಆರ್ಥಿಕ ಸಾಕ್ಷರತಾ ಆಂದೋಲನ ಮತ್ತು ಆರ್ಥಿಕ ಸೇರ್ಪಡೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 ನಬಾರ್ಡ್ನ ಯೋಜನೆಗಳು ಮತ್ತು ಬ್ಯಾಂಕುಗಳ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಲ್ಲಿ ದೇಶದ ಆರ್ಥಿಕ ಪ್ರಗತಿ ಸದೃಢಗೊಳ್ಳುವುದಲ್ಲದೇ ಪ್ರತಿ ವ್ಯಕ್ತಿ ಮತ್ತು ಕುಟುಂಬಗಳೂ ಆರ್ಥಿಕ ಸದೃಢಗೊಳ್ಳುವುದು ಎಂದು ಅವರು ತಿಳಿಸಿದರು.
ಇದೇ ವೇಳೆ ಬಸವೇಶ್ವರ ರೈತ ಬ್ಯಾಂಕ್ ಸ್ನೇಹಿತರ ಕೂಟದ ಉದ್ಘಾಟನೆ ನೆರವೇರಿಸಿದರು. ಮುಕ್ಕಣ್ಣೇಶ್ವರಿ ಆರೋಗ್ಯ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕನ್ನಡ ಕಲಾ ಸಂಸ್ಥೆ ಇವರು ಕಬ್ಬಳಗೆರೆ ಗ್ರಾಮದಲ್ಲಿ ಬೀದಿ ನಾಟಕದ ಮೂಲಕ ಆರ್ಥಿಕ ಸಾಕ್ಷರತೆ ಮತ್ತು ಬ್ಯಾಂಕ್ ಸೌಲಭ್ಯಗಳನ್ನು ಕುರಿತು ಬೀದಿ ನಾಟಕಗಳನ್ನು ಪ್ರದರ್ಶಿಸಿ  ಜಾಗೃತಗೊಳಿಸಿದರು.
 ಹಾಸನ ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಕೆ.ಬಿ.ಮಹದೇವಪ್ಪ ರೈತ ಕೂಟದ ಕಾರ್ಯನಿರ್ವಹಣೆ ಮತ್ತು ಚಟುವಟಿಕೆಗಳ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಹುಲಿಕಲ್ಲು ಗ್ರಾಮೀಣ ಬ್ಯಾಂಕಿನ ಶಾಖಾ ವ್ಯವಸ್ಥಾಪಕ ಎಂ.ಎಸ್.ಶಿವಕುಮಾರ್, ಬ್ಯಾಂಕ್ ರೀಜನಲ್ ಆಫಿಸರ್ ಚಂದ್ರದ್ರಶೇಖರ್,ಜಿ.ಆರ್.ನಾರಾಯಣ್, ಜ್ಯೋತಿ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.