ಜೀತಮುಕ್ತರಿಗೆ ಭೂ ಮಂಜೂರಾತಿ ಹಕ್ಕುಪತ್ರ ವಿತರಣೆ ಇಂದು
ಕ.ಪ್ರ.ವಾರ್ತೆ ಹಾಸನ ನ. 11
ಅರಕಲಗೂಡು ತಾಲೂಕು ಗಂಗೂರಿನ ಜೀತಮುಕ್ತರಿಗೆ ಭೂ ಮಂಜೂರಾತಿ ಹಕ್ಕು ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನ.12ರಂದು ವಿತರಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣಗೌಡ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು ಮಂಗಳವಾರ ಮಧ್ಯಾಹ್ನ ಜಿಲ್ಲೆಗೆ ಆಗಮಿಸಿ ಅರಕಲಗೂಡು ತಾಲೂಕಿನ ಗಂಗೂರು ಜೀತಮುಕ್ತರಿಗೆ ಭೂ ಮಂಜೂರಾತಿ ಹಕ್ಕು ಪತ್ರಗಳನ್ನು ಹಾಸನಾಂಬ ಕಲಾಕ್ಷೇತ್ರ ಅಥವಾ ಅಂಬೇಡ್ಕರ್ ಭವನದಲ್ಲಿ ವಿತರಿಸಲಿದ್ದಾರೆ ಎಂದರು.
ಅವಮಾನಗೊಳಿಸುವ ಪ್ರವೃತ್ತಿ ಜೆಡಿಎಸ್ದು: ಜಿಲ್ಲೆಯ ಕಾಡಾನೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅರಣ್ಯ ಸಚಿವರು ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಆ ಭಾಗದ ಶಾಸಕರನ್ನು ಗಣನೆಗೆ ತೆಗೆದುಕೊಂಡು ಕಾಡಾನೆ ಸಮಸ್ಯೆಗಳಿರುವ ಕಡೆಗೆ ಕರೆದು ಕೊಂಡು ಹೋಗಿದ್ದರು. ಆದರೆ ಸಚಿವರು ಈ ಕ್ಷೇತ್ರದ ಶಾಸಕರನ್ನು ಕಾರಿನಲ್ಲಿ ಒಟ್ಟಿಗೆ ಕರೆದುಕೊಂಡು ಹೋಗದೆ ಅವಮಾನಗೊಳಿಸಿದ್ದಾರೆ ಎಂದು ಜೆಡಿಎಸ್ ಮುಖಂಡರು ವಿನಾಕಾರಣ ಆರೋಪಿಸಿದ್ದಾರೆ.
ಅದೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೇಲೂರಿಗೆ ಹೋಗಿ ಅಲ್ಲಿ ಸಾಕಷ್ಟು ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಟ್ಟಡ ಉದ್ಘಾಟಿಸಿದ್ದಾರೆ. ಆ ಸಂದರ್ಭದಲ್ಲಿ ಆ ಭಾಗದ ಕಾಂಗ್ರೆಸ್ ಶಾಸಕರನ್ನು ಸೌಜನ್ಯಕ್ಕೂ ಕರೆದಿಲ್ಲ ಎಂದು ಆರೋಪಿಸಿದ ಅವರು, ಅವಮಾನಗೊಳಿಸುವಂತಹ ಪ್ರವೃತ್ತಿ ಜೆಡಿಎಸ್ ನಾಯಕರದ್ದೇ ವಿನಾ ಕಾಂಗ್ರೆಸ್ನವರಲ್ಲಿ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಜಿಲ್ಲೆಯನ್ನು ಕಡೆಗಣಿಸುತ್ತಿದೆ ಎಂದು ಹೇಳುವ ಮೂಲಕ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದರೂ ಅದಕ್ಕೆ ಜೆಡಿಎಸ್ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ. ವಿನಾಕಾರಣ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುವ ಮೂಲಕ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜೆಡಿಎಸ್ ಮುಖಂಡರು ಪ್ರತಿಭಟನೆ ಮಾಡುವುದಾದರೆ ನಾವು ಜೆಡಿಎಸ್ ನಾಯಕರ ಮನೆ ಮುಂದೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪರ್ವೀಜ್ಪಾಶಾ, ಜೈಕುಮಾರ್, ಬಸವರಾಜು, ಬಾಲಶಂಕರ್, ಅಮೀರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

