ಮೂಢನಂಬಿಕೆ ವಿರುದ್ಧ ವಿಧೇಯಕ ಹಾಸ್ಯಾಸ್ಪದ
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ನ.11
ಚುನಾವಣೆಯ ಸಂದರ್ಭದಲ್ಲಿ ಮಠಗಳನ್ನು ಓಲೈಸಿ ಮಠಾಧೀಶರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮಂತ್ರಿಗಳು ಈಗ ಮೂಢನಂಬಿಕೆಯ ವಿರುದ್ಧ ವಿಧೇಯಕವನ್ನು ತರುವುದಾಗಿ ಹೇಳುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಇಲ್ಲಿ ಮುಖ್ಯಮಂತ್ರಿಗಳ ಹಾಗೂ ಸರ್ಕಾರದ ಇವೈಜ್ಞಾನಿಕ ನಿಲುವಿನ ವಿರುದ್ಧ ಇಲ್ಲಿ ಟೀಕಾಪ್ರಹಾರ ನಡೆಸಿದರು.
ಅವರು ಸೋಮವಾರ ತಾಲೂಕಿನ ಬಾಗೀವಾಳು ಗ್ರಾಮದಲ್ಲಿನ ವೀರಭದ್ರೇಶ್ವರ ದೇವಾಲಯದ ದ್ವಿತೀಯ ವಾರ್ಷಿಕೋತ್ಸವ, ಅಗ್ನಿಕೊಂಡೋತ್ಸವ ಹಾಗೂ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದರು.
ರೇವಣ್ಣ ಅವರು ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಸಂಬದ್ಧ ನಿಲುವುಗಳ ವಿರುದ್ಧ ಹರಿಹಾಯ್ದರಲ್ಲದೇ, ಮೂಡನಂಭಿಕೆ ವಿಧೇಯಕವನ್ನು ಜಾರಿಗೆ ತರುವುದನ್ನು ಬಿಟ್ಟಾಕಿ, ರಾಜ್ಯದಲ್ಲಿನ ಗ್ರಾಮೀಣ ಮಕ್ಕಳಿಗೆ ಒಳ್ಳೆಯ ಶಿಕ್ಷಣ, ಕುಡಿಯಲು ಶುದ್ಧ ನೀರು, ರೈತರಿಗೆ ಕೃಷಿಗೆ ಪೂರಕವಾಗುವಂತೆ ಗೊಬ್ಬರದ ಬೆಲೆ ಕಡಿಮೆ ಮಾಡಿ ಹಳ್ಳಿಗಳ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರನ್ನು ನೇಮಿಸಿ ಎಂದು ಸಲಹೆ ನೀಡಿದರು.
ಮುಂಬರಲಿರುವ ಲೋಕಸಭಾ ಚುನಾವಣೆ ಗಮನದಲ್ಲಿರಿಸಿಕೊಂಡು ಕೇಂದ್ರ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತಗಳನ್ನು ಓಲೈಸಲು ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದ ಅವರು, ಕಾರ್ಯಕ್ರಮಗಳನ್ನು ರೂಪಿಸುವಾಗ ಸರ್ಕಾರಗಳು ಹತ್ತು ಹಲವಾರು ಬಾರಿ ಚಿಂತಿಸಿ ಪೂರ್ವ ಸಿದ್ಧತೆಯೊಂದಿಗೆ ಜಾರಿಗೊಳಿಸುವಂತೆ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಅವೈಜ್ಞಾನಿಕ ನೀತಿಯನ್ನು ತರಾಟೆಗೆ ತೆಗೆದುಕೊಂಡರು.
ಕಾರ್ಯಕ್ರಮದಲ್ಲಿ ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಶ್ರೀ ಶಿವಾನುಭವ ಚರಮೂರ್ತಿ ಕರಿವೃಷಭ ದೇಶೀಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಮಾತನಾಡಿದರು. ಸೋಮಶೇಖರ ಶಿವಾಚಾರ್ಯಸ್ವಾಮಿ ತಾಲೂಕು ವೀರಶೈವ ಸಮಾಜದ ಮುಖಂಡ ಜಯಶಂಕರಪ್ಪ, ತಹಸೀಲ್ದಾರ್ಮಂಜುನಾಥ್, ತಾಲೂಕು ಜಾನಪದ ಪರಿಷತ್ತಿನ ಅಧ್ಯಕ್ಷರಾದ ಬಾ.ರಾ.ಸುಬ್ಬರಾಯ, ಗ್ರಾಮದ ಮುಖಂಡರಾದ ತಮ್ಮಯ್ಯಣ್ಣ, ದೇವಾಲಯ ಸಮಿತಿಯ ಧರ್ಮದರ್ಶಿ ಬಸವರಾಜು ಬಾಗೀವಾಳು, ಮೊದಲಾದವರು ಇದ್ದರು. ಇದೇ ಸಂದರ್ಭದಲ್ಲಿ ಗ್ರಾಮದವರೇ ಆದ ಬಂಟ್ವಾಳ ತಹಸೀಲ್ದಾರ್ ಮಲ್ಲೇಸ್ವಾಮಿ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

