ಹಾಸನ

ರಸ್ತೆ ದುರಸ್ತಿಗೊಳಿಸಿ: ಕರವೇ ಧರಣಿ 2ನೇ ದಿನಕ್ಕೆ

Published On :

ಹಾಸನ: ಹಾಸನ- ದುದ್ದ- ತಿಪಟೂರು ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೈಗೊಂಡಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ಮಂಗಳವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ಮುಂದುವರೆಸಿದ್ದಾರೆ. ದುದ್ದ ಮಾರ್ಗವಾಗಿ ತಿಪಟೂರು ಸಂಪರ್ಕಿಸುವ ರಸ್ತೆ ಅಭಿವೃದ್ಧಿಯ ಕನಸು ಅದೇಕೋ ನನಸಾಗುವ ಲಕ್ಷಣಗಳಿಲ್ಲ. ಈ ರಸ್ತೆಯ ಅಭಿವೃದ್ಧಿಗೆ ಇನ್ನೂ ಗ್ರಹಣ ಬಿಡುತ್ತಿಲ್ಲ. ರಸ್ತೆಯಲ್ಲಿ ಮಂಡಿ ಆಳದ ಗುಂಡಿಗಳಾಗಿದ್ದು, ಅದನ್ನು ಮುಚ್ಚುವಂಥ ಕಾರ್ಯಕ್ಕೆ ಸಂಬಂಧಪಟ್ಟ ಇಲಾಖೆಯವರು ಮುಂದಾಗುತ್ತಿಲ್ಲ. ಸಾರ್ವಜನಿಕರು ಪ್ರತಿನಿತ್ಯ ರಸ್ತೆಗಳಲ್ಲಿ ಓಡಾಡಲು ಪ್ರಯಾಸ ಪಡುತ್ತಿದ್ದರು. ಅಧಿಕಾರಿಗಳು ಕಂಡರೂ ಕಾಣದಂತೆ ಕೈಕಟ್ಟಿ ಕುಳಿತಿದ್ದಾರೆ ಎಂದು ಪ್ರತಿಭಟನಾಕರರು ಆಕ್ರೋಶ ವ್ಯಕ್ತಪಡಿಸಿದರು. ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಇದರ ಕಾಮಗಾರಿ ಹೊಣೆ ಹೊತ್ತ ಅಭಿಜಿತ್ ಗ್ರೂಪ್ ಕಾಮಗಾರಿ ನಿರ್ವಹಿಸದೆ ಕಾಣೆಯಾಗಿದೆ. ರಸ್ತೆಯನ್ನು ಅಲ್ಲಲ್ಲಿ ಗುಂಡಿ ತೆಗೆದು ಅರ್ಧ ಭಾಗ ಹಾಗೆ ಬಿಟ್ಟಿರುವುದರಿಂದ ಗುಂಡಿಗಳು ದೊಡ್ಡದಾಗುತ್ತಿವೆ. ಈ ಹದಗೆಟ್ಟ ರಸ್ತೆಯಿಂದಾಗಿ ವಾಹನಗಳ ಟೈರ್ ಪಂಕ್ಚರ್ ಆಗಿ ಪ್ರಯಾಣಿಕರು ವ್ಯಥೆ ಪಡುತ್ತಿದ್ದರೂ ಸರ್ಕಾರವಾಗಲೀ, ಜಿಲ್ಲಾಡಳಿತವಾಗಲೀ ಇದರತ್ತ ಗಮನ ಹರಿಸುತ್ತಿಲ್ಲ. ಕೂಡಲೇ ರಸ್ತೆ ದುರಸ್ತಿಪಡಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಮನುಕುಮಾರ್, ಉಪಾಧ್ಯಕ್ಷ ಸೀತಾರಾಂ, ಹರೀಶ್‌ಗೌಡ, ಲೋಕೇಶ್ ಬೆಳಗಟ್ಟೆ, ನಗರಾಧ್ಯಕ್ಷ ಶಿವಕುಮಾರ್, ಬೇಲೂರು ತಾಲೂಕು ಅಧ್ಯಕ್ಷ ಚಂದ್ರಶೇಖರ್, ಜಗನ್ನಾಥ್, ಸರೋಜಮ್ಮ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.