ಹಾಸನ

ವಿವೇಕಾನಂದ ರಥಯಾತ್ರೆಗೆ ಭವ್ಯ ಸ್ವಾಗತ

Published On :

ಹಾಸನ: ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಹೊರಟಿರುವ ಶ್ರೀವಿವೇಕಾನಂದ ರಥಯಾತ್ರೆಯನ್ನು ನಗರದಲ್ಲಿ ಮಂಗಳವಾರ ಭವ್ಯವಾಗಿ ಸ್ವಾಗತಿಸಲಾಯಿತು. ಶ್ರೀರಾಮಕೃಷ್ಣ ಮಠ ಮತ್ತು ಶ್ರೀರಾಮಕೃಷ್ಣ ಭಾವ ಪ್ರಚಾರ ಪರಿಷತ್‌ಗಳ ಸಂಯುಕ್ತಾಶ್ರಯದಲ್ಲಿ ನಗರದ ಆದಿಚುಂಚನಗಿರಿ ಮಠಕ್ಕೆ ರಥಯಾತ್ರೆ ಆಗಮಿಸಿತು. ಶ್ರೀಆದಿಚುಂಚನಗಿರಿ ಶಾಖಾ ಮಠದ ಶ್ರೀಶಂಭುನಾಥ ಸ್ವಾಮೀಜಿ ಅವರು ರಥಯಾತ್ರೆಗೆ ಚಾಲನೆ ನೀಡಿದರು. ರಥಯಾತ್ರೆಯು ಶ್ರೀಆದಿಚುಂಚನಗಿರಿ ಶಾಖಾ ಮಠದಿಂದ ಹೊರಟು ನಗರದ ನಾನಾ ಬೀದಿಗಳಲ್ಲಿ ತೆರಳಿ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಯುವಕರಿಗೆ ತಿಳಿಸಿ, ಅವರಲ್ಲಿ ಆತ್ಮವಿಶ್ವಾಸ, ರಾಷ್ಟ್ರಭಕ್ತಿ, ಕ್ರಿಯಾಶೀಲತೆ ಹಾಗೂ ಪರಿಪೂರ್ಣ ವ್ಯಕಿತ್ವವನ್ನು ರೂಪಿಸುವ ಉದ್ದೇಶ ಹೊಂದಲಾಯಿತು. ವಿದ್ಯಾರ್ಥಿಗಳು, ಸಾರ್ವಜನಿಕರು ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ರಾಮನಾಥಪುರದಲ್ಲಿ ಕುಡುಕರ ಹಾವಳಿ
ಅರಕಲಗೂಡು: 
ರಾಮನಾಥಪುರದ ಬಸವೇಶ್ವರ ವೃತ್ತ ಸೇರಿ ಪಟ್ಟಣದ ನಾನಾ ರಸ್ತೆ ರಸ್ತೆಗಳಲ್ಲಿ ಕುಡುಕರು ಬಿದ್ದಿರುವ ದೃಶ್ಯ ಸಾಮಾನ್ಯವಾಗಿದೆ. ಹಾಡುಹಗಲೇ ಫುಟ್‌ಪಾತ್‌ಗಳಲ್ಲಿ ಹಾಗೂ ಗ್ರಾಪಂ ಆವರಣ, ಸಂತೆಕಟ್ಟೆ ಮೇಲೆ ಬಿಸಿಲು,ಮಳೆಯನ್ನು ಲೆಕ್ಕಿಸದೇ ನಿದ್ರಿಸುತ್ತಿರುವ ನೋಟ ಸಾಮಾನ್ಯವಾಗಿ ಬಿಟ್ಟಿದೆ.  ಹೋಬಳಿಯ ಕಾಟ್ಯಾಳು ಬಾರೆ, ರುದ್ರಪಟ್ಟಣ ಕ್ರಾಸ್, ಆನಂದೂರು ಹತ್ತಿರ ಹಾನಗಲ್ ಮುಂತಾದ ಕಡೆಗಳಲ್ಲಿ ರಾಜಾರೋಷವಾಗಿ ಹಗಲು ರಾತ್ರಿ ಎನ್ನದೇ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.