ಹಾಸನ

ಶುಲ್ಕ ರಿಯಾಯಿತಿ ವಾಪಸ್‌ಗೆ ಮುಂದುವರಿದ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರತಿಭಟನೆ

Published On :

ಹಾಸನ: ಇಲ್ಲಿನ ಮಲೆನಾಡು ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಲ್ಕದ ರಿಯಾಯಿತಿ ಹಣವನ್ನು ವಾಪಸ್ ನೀಡುವಂತೆ ಆಗ್ರಹಿಸಿ ಮಂಗಳವಾರ ಸಹ ಪ್ರತಿಭಟನೆ ಮುಂದುವರೆಸಿದರು.
ವಿದ್ಯಾರ್ಥಿಗಳ ಶುಲ್ಕದ ಹಣವನ್ನು ಹಿಂದಿರುಗಿಸದೇ ಕಾಲೇಜು ಆಡಳಿತ ಮಂಡಳಿ ವಿನಾಕಾರಣ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಮಲೆನಾಡು ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ಮತ್ತೆ ಪ್ರತಿಭಟಿಸಿದರು. ಮಲೆನಾಡು ಕಾಲೇಜಿಗೆ ವಿದ್ಯಾರ್ಥಿಗಳು ದಾಖಲಾಗುವ ವೇಳೆ ಪಾವತಿಸಿದ್ದ ಶುಲ್ಕದಲ್ಲಿ ಮುಕ್ಕಾಲು ಭಾಗವನ್ನು ರಿಯಾಯಿತಿಯಾಗಿ ಸರ್ಕಾರ ಕಾಲೇಜಿಗೆ ಪಾವತಿಸಿದ ನಂತರ ವಿದ್ಯಾರ್ಥಿಗಳಿಗೆ ರೀಫಂಡ್ ಮಾಡಬೇಕು ಎಂಬ ನಿಯಮವಿದೆ. ಸರ್ಕಾರದಿಂದ ವಿದ್ಯಾರ್ಥಿ ವೇತನ ತರಿಸಿಕೊಂಡು ವಿದ್ಯಾರ್ಥಿಗಳಿಗೆ ಮರುಪಾವತಿ ಮಾಡುವ ಜವಾಬ್ದಾರಿ ಕಾಲೇಜು ಆಡಳಿತ ಮಂಡಳಿಗಿದ್ದು, ಅದನ್ನು ಸರಿಯಾಗಿ ನಿರ್ವಹಿಸಿದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಇತರೆ ಎಲ್ಲಾ ಖಾಸಗಿ ತಾಂತ್ರಿಕ ಕಾಲೇಜುಗಳಲ್ಲೂ ಶುಲ್ಕದ ಹಣವನ್ನು ವಿದ್ಯಾರ್ಥಿಗಳಿಗೆ  ಹಿಂದಿರುಗಿಸಲಾಗಿದ್ದು, ಮಲೆನಾಡು ಕಾಲೇಜಿನಲ್ಲಿ ಮಾತ್ರ ಎರಡೂವರೆ ವರ್ಷದಿಂದ ಹಣ ರೀಫಂಡ್ ಮಾಡಿಲ್ಲ ಎಂದು ವಿದ್ಯಾರ್ಥಿಗಳು, ಕಾಲೇಜಿನ ಎಲ್ಲಾ ಸೆಮಿಸ್ಟರ್‌ನ ಒಟ್ಟು 1217 ವಿದ್ಯಾರ್ಥಿಗಳ  8 ಕೋಟಿ ರು.ಗೂ ಅಧಿಕ ಹಣವನ್ನು ಹಿಂದಿರುಗಿಸಬೇಕಿದ್ದು, ಹಣ ನೀಡದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿ.ಆರ್. ದೀಕ್ಷಿತ್, ಅನ್ವೀಕ್, ಜಿ. ಉಲ್ಲಾಸ್, ಸಚೀನ್, ಅನು, ಗಣೇಶ್ ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ನಿರತರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.