ಹಾಸನ

ಬೋನಿಗೆ ಬಿತ್ತು ನರಭಕ್ಷಕ ಚಿರತೆ

Published On :

ಕ.ಪ್ರ.ವಾರ್ತೆ ,  ಹಾಸನ ,  ನ. 13
ಗ್ರಾಮಸ್ಥರಿಗೆ ಭಾರೀ ತಲೆನೋವಾಗಿ ಪರಿಣಮಿಸಿದ್ದ ನರಭಕ್ಷಕ ಚಿರತೆ ಬುಧವಾರ ಅರಣ್ಯ ಇಲಾಖೆಯ ಬೋನಿಗೆ ಸೆರೆ ಸಿಕ್ಕಿದೆ. ತಾಲೂಕಿನ ಕಲ್ಲುಗುಡುಗನಹಳ್ಳಿಯಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 5ರಿಂದ 6 ವರ್ಷ ವಯಸ್ಸಿನ ಗಂಡು ಚಿರತೆ ಬಂಧಿಯಾಗಿದೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದ ಚಿರತೆಗಳ ಹಾವಳಿಯಿಂದ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿತ್ತು. ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದರು. ಇದರಿಂದ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆಯವರು ಕಲ್ಲುಗುಡುಗನಹಳ್ಳಿಯಲ್ಲಿ ಚಿರತೆ ಸೆರೆಗಾಗಿ ಬೋನ್ ಇಟ್ಟಿದ್ದರು. ಬೋನಿನೊಳಗೆ ಆಹಾರವನ್ನೂ ಇರಿಸಲಾಗಿತ್ತು.
ಆಹಾರ ಅರಸಿ ಬಂದ ಚಿರತೆ, ಬೋನಿನಲ್ಲಿದ್ದ ಆಹಾರ ತಿನ್ನಲು ಮುಂದಾದಾಗ ಗಂಡು ಚಿರತೆ ಬೋನಿನಲ್ಲಿ ಸೆರೆಯಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಗ್ರಾಮಕ್ಕೆ ನುಗ್ಗಿ ಜಾನುವಾರುಗಳು ಸೇರಿದಂತೆ ನಾಯಿಗಳನ್ನು ತಿಂದು ಹಾಕಿತ್ತು. ಇದರಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಈಗ ಚಿರತೆ ಸೆರೆಯಾಗಿರುವುದರಿಂದ ಜನತೆ ನಿಟ್ಟುಸಿರು ಬಿಟ್ಟಿಂತಾಗಿದೆ. ಇನ್ನು ಕೆಲವೊಂದು ಚಿರತೆಗಳು ಇರಬಹುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಚಿರತೆ ಮರಿಗೆ ಆರೈಕೆ: ಬೆಕ್ಕಿನಂತೆ ಕಂಡ ಚಿರತೆ ಮರಿಯೊಂದು ಗ್ರಾಮಸ್ಥರ ಕೈಗೆ ಸಿಕ್ಕಿ ಆಶ್ರಯ ಪಡೆದ ಘಟನೆ ಬುಧವಾರ ನಡೆದಿದೆ. ತಾಲೂಕಿನ ಮಾರನಹಳ್ಳಿಯಲ್ಲಿ ಚಿರತೆ ಮರಿಯೊಂದು ತಾಯಿಯಿಂದ ತಪ್ಪಿಸಿಕೊಂಡು ಬಂದಿದ್ದು, ಅದು ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಅದನ್ನು ಕಂಡ ಗ್ರಾಮಸ್ಥರು ಬೆಕ್ಕಿನ ಮರಿ ಇರಬೇಕು ಎಂದು ಸುಮ್ಮನಾಗಿದ್ದರು. ನಂತರ ಆ ಮರಿ ಚಿರತೆ ಆಕೃತಿಯನ್ನು ಹೋಲುತ್ತಿದ್ದರಿಂದ, ಅದನ್ನು ತೆಗೆದುಕೊಂಡು ಹಾಲು ಕುಡಿಯುವ ಮೂಲಕ ಆರೈಕೆ ಮಾಡಿದ್ದಾರೆ. ಈ ವಿಚಾರವನ್ನು ಅರಣ್ಯಾ ಇಲಾಖೆಯವರಿಗೂ ತಿಳಿಸಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಹೋಗಿ ಚಿರತೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ಚಿರತೆ ಮರಿಯ ಆರೈಕೆಗೆ ಕ್ರಮ ಕೈಗೊಂಡಿದ್ದಾರೆ.
ತಾಲೂಕಿನ ಮಾರನಹಳ್ಳಿಯಲ್ಲಿ ಬೆಂಕಿನಂತೆ ಕಂಡ ಚಿರತೆ ಮರಿಯೊಂದನ್ನು ಗ್ರಾಮಸ್ಥರು ಆರೈಕೆ ಮಾಡಿದ್ದಾರೆ. ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ತೆರಳಿ ಚಿರತೆ ಮರಿಯನ್ನು ವಶಕ್ಕೆ ತೆಗೆದುಕೊಳ್ಳಲಿದ್ದಾರೆ.
- ಲಕ್ಷ್ಮಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.