ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ
ಕ.ಪ್ರ.ವಾರ್ತೆ ಹಾಸನ ನ. 14
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದಲ್ಲಿ ಗುರುವಾರ ವಾತ್ಸಲ್ಯ ಆಸ್ಪತ್ರೆ ವತಿಯಿಂದ ಜಾಗೃತಿ ಜಾಥ ನಡೆಯಿತು. ನಗರದ ವಾತ್ಸಲ್ಯ ಆಸ್ಪತ್ರೆಯಿಂದ ಮಧುಮೇಹ ತಡೆಗಟ್ಟಿ ಎಂಬ ಶೀರ್ಷಿಕೆಯಡಿ ಹೊರಟ ಜಾಗೃತಿ ಜಾಥಾ ನಗರದ ನಾನಾ ಬೀದಿಗಳಲ್ಲಿ ಚಲಿಸಿ ಜಾಗೃತಿ ಮೂಡಿಸಿದರು. ಮಧುಮೇಹದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಸಾರ್ವಜನಿಕರು ಮಧುಮೇಹ ತಡೆಗಟ್ಟಲು ಮುಂದಾಬೇಕು ಎಂದು ಕರೆ ನೀಡಿದರು. ವಾತ್ಸಲ್ಯ ಆಸ್ಪತ್ರೆ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಸಿಬ್ಬಂದಿ ಇತರರು ಇದ್ದರು.
ಅನಗತ್ಯ ಲೋಡ್ ಶೆಡ್ಡಿಂಗ್: ದೂರು
ಬೇಲೂರು: ತಾಲೂಕಿನ ಬಿಕ್ಕೋಡು ಹೋಬಳಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅನಗತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದರಿಂದ ಹೋಬಳಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಭಾರೀ ತೊಂದರೆ ಆಗುತ್ತಿದೆ. ಈ ಬಗ್ಗೆ ಕೂಡಲೇ ಸಂಬಂಧಪಟ್ಟವರು ಗಮನನೀಡಿ ಸಮಸ್ಯೆ ಬಗೆಹರಿಸುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಸ್. ತೀರ್ಥಪ್ಪ ಒತ್ತಾಯಿಸಿದ್ದಾರೆ. ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಹೋಬಳಿಯ ಕೆಸಗೋಡು , ನೀಲಹಳ್ಳಿ , ಮಲ್ಲೇಶನಗರ, ಗೌತಮನಗರ, ಕೆರಲೂರು, ವಾಟೇಹೊಳೆ, ಗುಮ್ಮನಹಳ್ಳಿ, ಸಿಂಗ್ರವಳ್ಳಿ, ಹೆಮ್ಮಗನಹಳ್ಳಿ ಸೇರಿದಂತೆ ಇನ್ನು ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಭಾರೀ ತೊಂದರೆಯಾಗುತ್ತಿದೆ. ಹಗಲು ಮತ್ತು ರಾತ್ರಿ ವೇಳೆ ಕೂಡ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಕುಡಿಯುವ ನೀರಿನ ಟ್ಯಾಂಕ್ಗಳಿಗೆ ನೀರು ತುಂಬಿಸಲು ಆಗುತ್ತಿಲ್ಲ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

