ಕಾಳೇನಹಳ್ಳಿಯಲ್ಲಿ ವಿಶ್ವ ಮಧುಮೇಹ ದಿನಾಚರಣೆ
ಚನ್ನರಾಯಪಟ್ಟಣ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಪಟ್ಟಣದ ನಾಗೇಶ್ ಆಸ್ಪತ್ರೆ ವತಿಯಿಂದ ತಾಲೂಕಿನ ಡಿ.ಕಾಳೇನಹಳ್ಳಿ ಗ್ರಾಮದಲ್ಲಿ ಜನತೆಗೆ ಮಧುಮೇಹ ಪತ್ತೆ ಕಾರ್ಯ ನಡೆಸಿದರು.
ನಾಗೇಶ್ ಆಸ್ಪತ್ರೆಯ ಮುಖ್ಯಸ್ಥ ಡಾ.ನಾಗೇಶ್ ಹಾಗೂ ಆಸ್ಪತ್ರೆ ಸಿಬ್ಬಂದಿ ಡಿ.ಕಾಳೇನಹಳ್ಳಿ ಗ್ರಾಮದಲ್ಲಿನ ಎಲ್ಲಾ ಮನೆ ಮನೆಗೆ ತೆರಳಿ ಗ್ಲೂಕೋ ಮೀಟರ್ನಿಂದ ರಕ್ತದಲ್ಲಿನ ಸಕ್ಕರೆ ಅಂಶವನ್ನು ಪತ್ತೆ ಹಚ್ಚುವ ಕಾರ್ಯ ನಡೆಸಿದರು.
ಆಸ್ಪತ್ರೆಯ 30ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿಗಳು 5ಗುಂಪುಗಳಲ್ಲಿ ಗ್ರಾಮದಲ್ಲಿನ ಎಲ್ಲಾ ಮನೆಗಳಿಗೆ ತೆರಳಿ ರಕ್ತದಲ್ಲಿನ ಸಕ್ಕರೆ ಅಂಶ ಪತ್ತೆ ಜತೆಗೆ ಆರೋಗ್ಯದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಸಿದರು.
ಡಾ.ನಾಗೇಶ್ ಮಾತನಾಡಿ ವಿಶ್ವದಲ್ಲಿ 371 ದಶಲಕ್ಷ ಮಧುಮೇಹಿಗಳಿದ್ದು, ದೇಶದಲ್ಲಿ ಇತ್ತೀಚೆಗೆ ಸಕ್ಕರೆ ಖಾಯಿಲೆ ಸಾಂಕ್ರಾಮಿಕ ರೋಗದಂತೆ ಹೆಚ್ಚುತ್ತಿದ್ದಾರೆ ಎಂದು ತಿಳಿಸಿದರು.
ದೇಶದಲ್ಲಿ 61.3 ದಶಲಕ್ಷ ಮಧುಮೇಹಿಗಳಿದ್ದು, ವಿಶ್ವದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮುಂದಿನ ದಿನಗಳಲ್ಲಿ ಇದು ದ್ವಿಗುಣವಾಗುವ ನಿರೀಕ್ಷೆಯಿದ್ದು, ಕೆಲವರು ಮಧುಮೇಹಿಗಳಾಗಿದ್ದರೂ ಅದರ ಅರಿವಿಲ್ಲದೆ ಪರಿಕ್ಷೆ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದರು.
ಸೋಮಾರಿತನ, ದೇಹದ ತೂಕವನ್ನು ಕಾಪಾಡಿಕೊಳ್ಳದಿರುವುದು, ಒತ್ತಡದ ಯಾಂತ್ರಿಕ ಜೀವನ, ಅತಿಯಾದ ಧೂಮಪಾನ ಹಾಗೂ ಮದ್ಯಪಾನ ಮಧುಮೇಹಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.
ಪಟ್ಟಣದ ಪ್ರದೇಶದಲ್ಲಿ ಶೇ.9 ಹಾಗೂ ಗ್ರಾಮೀಣ ಪ್ರದೇಶದಲ್ಲಿ ಶೇ.3ರಷ್ಟು ಮಧುಮೇಹಿಗಳಿರುವುದು ಪತ್ತೆಯಾಗಿದ್ದು, ಬಿರುಸಿನ ನಡಿಗೆ, ವ್ಯಾಯಾಮ, ಆಹಾರದಲ್ಲಿ ಹಸಿರು ತರಕಾರಿ, ಕಡಿಮೆ ಕೊಬ್ಬಿನ ಆಹಾರ ಸೇವನೆಯಿಂದ ಖಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು ಎಂದು ತಿಳಿಸಿದರು.
ನಾಗೇಶ್ ಸ್ಕೂಲ್ ಆಫ್ ನರ್ಸಿಂಗ್ ಹಾಗೂ ಜ್ಞಾನಸಾಗರ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

