ಹಾಸನ

ತಾ.ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ

Published On :

ಅರಸೀಕೆರೆ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹೊಮ್ಮಲು ಶಿಕ್ಷಕರ ಜವಾಬ್ದಾರಿ ಮಹತ್ತರವಾದದ್ದು ಎಂದು ಬಾಳೇನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಎಚ್.ಆರ್.ಸ್ವಾಮಿ ಹೇಳಿದರು.
 ತಾಲೂಕಿನ ಬಾಣಾವರ ಸಮೀಪವಿರುವ ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ರಾಜ್ಯ ವಿಜ್ಞಾನ ಪರಿಷತ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಿಕ್ಷಣ ಇಲಾಖೆ ಹಾಗೂ  ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸಮಾರಂಭದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಇರುವ ಆಸಕ್ತಿಯನ್ನು ಗಮನಿಸಿ ಅದಕ್ಕೆ ಸೂಕ್ತ ಮಾರ್ಗದರ್ಶನ  ನೀಡಿದಲ್ಲಿ ಆತ ಮುಂದಿನ ದಿನಗಳಲ್ಲಿ ಒಬ್ಬ ವಿಜ್ಞಾನಿಯಾಗಬಲ್ಲನು ಎಂದು ತಿಳಿಸಿದರು.
 ಬಾಲ ವಿಜ್ಞಾನ ನಿಕಟ ಪೂರ್ವ ಸಂಪಾದಕ ಪ್ರೊ.ಎಂ.ಆರ್.ನಾಗರಾಜ್ ಮಾತನಾಡಿ, ವಿಜ್ಞಾನ ಮಕ್ಕಳಿಗೆ ಸವಾಲಾಗಿದೆ. ಹೆದರುವವನು ವಿಜ್ಞಾನಿಯಾಗಲು ಸಾಧ್ಯವಿಲ್ಲ. ವಿಜ್ಞಾನವನ್ನು ಹೆಚ್ಚು ಹೆಚ್ಚು ಅಧ್ಯಾಯನ ಮಾಡಿದಂತೆ ಜ್ಞಾನ ಹೆಚ್ಚುತ್ತದೆ. ಇದರಿಂದ ಹೊಸ ಹೊಸ ಅವಿಷ್ಕಾರಗಳನ್ನು ಜಗತ್ತಿಗೆ ಪರಿಚಯಿಸಬಹುದು. ಇಂತಹ ಶಕ್ತಿ ಎಲ್ಲ ಮಕ್ಕಳಲ್ಲಿದೆ. ಅದನ್ನು ಗುರ್ತಿಸಿ ಹೊರತೆಗೆಯುವ ಕಾರ್ಯ ಆಗಬೇಕು ಎಂದರು.
ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ ಮಾತನಾಡಿ,  ಇಂದಿನ ಆಧುನಿಕ ಯುಗದಲ್ಲಿ ಏನೆಲ್ಲಾ  ಬದಲಾವಣೆಗಳು ಆಗುತ್ತಿದ್ದು ಅದಕ್ಕೆ ಅನುಗುಣವಾಗಿ ಮಕ್ಕಳು ವಿಜ್ಞಾನದಲ್ಲಿ ಆಳವಾದ ಅಧ್ಯಯನ  ಮಾಡುವ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಂಡು ದೇಶದ ಸತ್ಪ್ರಜೆಯಾಗಬೇಕೆಂದು ಆಶಿಸಿದರು.
 ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ ಮಾತನಾಡಿ ಸರ್ಕಾರಿ ನೌಕರಿ ಸಿಗುತ್ತದೆಯೋ, ಇಲ್ಲವೋ ಶಿಕ್ಷಣವೆಂಬ  ಬಂಡವಾಳದ ಮೂಲಕ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
 ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ನಟರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುಕುಲ ಇಂಟರ್‌ನ್ಯಾಷನಲ್ ಶಾಲೆಯ ಅಧ್ಯಕ್ಷ ಆನಂದಮೂರ್ತಿ, ದಿನೇಶ್, ತಾಪಂ ಸದಸ್ಯ ಬಿ.ಆರ್.ಜಯಣ್ಣ ಮಾತನಾಡಿದರು.
  ಜಿಪಂ ಸದಸ್ಯೆ ರತ್ಮಮ್ಮ, ಕ್ಷೇತ್ರ ಸಮನ್ವಯಾಧಿಕಾರಿ ಲಕ್ಷ್ಮಣ್ ಎಂ ಬಳೂಟಗಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಸಿ.ಮಲ್ಲಿಕಾರ್ಜುನಪ್ಪ, ರೇಣುಕಾ, ಪ್ರಾಥಮಿಕ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಲ್ಯಾಣಕುಮಾರ್, ಮೋತಿಲಾಲ್,  ವಿಜ್ಞಾನ ಕೇಂದ್ರದ ಮೌನೇಶ, ಕೃಷಿ ಅಧಿಕಾರಿ ಸೋಮಶೇಖರ್, ತೋಟಗಾರಿಕೆ ಅಧಿಕಾರಿ ಶಿವಕುಮಾರ್, ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.