ಹಾಸನ

ಪುರಸಭೆ ಮುಖ್ಯಾಧಿಕಾರಿ ಮೇಲೆ ಗುಂಪು ಹಲ್ಲೆ

Published On :

ಕನ್ನಡಪ್ರಭ ವಾರ್ತೆ, ಚನ್ನರಾಯಪಟ್ಟಣ, ನ.15
ಪುರಸಭೆ ಪರವಾನಗಿಯಿಲ್ಲದೆ ಅಂಗಡಿಗಳಲ್ಲಿ ಬಹಿರಂಗವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ 6 ಅಂಗಡಿಗಳಿಗೆ ಬೀಗ ಹಾಕಿದ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ಪುರಸಭಾ ಮುಖ್ಯಾಧಿಕಾರಿ ಮೇಲೆ ಅಂಗಡಿ ಮಾಲಿಕ ತನ್ನ ಬೆಂಬಲಿಗರೊಂದಿಗೆ ಹಲ್ಲೆ ನಡೆಸಿದ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಪಟ್ಟಣದ ಕಂಚಕಾರ ಬೀದಿ ಹಾಗೂ ದೊಡ್ಡಮೊಹಲ್ಲಾ ರಸ್ತೆಯಲ್ಲಿ ಅನುಮತಿಯಿಲ್ಲದೆ ಗೋಮಾಂಸ ಮಾರಾಟ ಮಾಡುತ್ತಿದ್ದ 6 ಅಂಗಡಿಗಳಿಗೆ ಬೀಗ ಹಾಕಿದ ಪುರಸಭಾ ಮುಖ್ಯಾಧಿಖಾರಿ ಚಂದ್ರಶೇಖರ್ ಅವರನ್ನು ಸಾರ್ವಜನಿಕವಾಗಿ ನಿಂದಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇದಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪುರಸಭಾಧ್ಯಕ್ಷ ಮಂಜಣ್ಣ ಹಾಗೂ ಪೊಲೀಸರ ಬೆಂಬಲದೊಂದಿಗೆ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳನ್ನು ಮುಚ್ಚಿಸಿ ಮುಂದಿನ ದಿನಗಳಲ್ಲಿ ಪುರಸಭಾ ಅನುಮತಿಯಿಲ್ಲದೆ ಮಾರಾಟ ಮಾಡಕೂಡದು ಎಂದು ವ್ಯಾಪಾರಸ್ಥರಿಗೆ ತಿಳಿಹೇಳಿ ವಾಪಸ್ ಬರುತ್ತಿದ್ದ ಸಂದರ್ಭದಲ್ಲಿ ಅಬ್ದುಲ್ ಆದಿ ಸೇರಿದಂತೆ 10 ಮಂದಿಯಿದ್ದ ಗುಂಪು  ಪುರಸಭಾ ಮುಖ್ಯಾಧಿಕಾರಿ ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಿ, ಇದೇ ವೇಳೆ ಪುರಸಭಾಧ್ಯಕ್ಷ ಮಂಜಣ್ಣ ಅವರನ್ನು ಎಳೆದಾಡಿದ್ದಾರೆ.
ಮುಖ್ಯಾಧಿಕಾರಿ ಚಂದ್ರಶೇಖರ್ ಅವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ  ಸಿಟಿ ಸ್ಕ್ಯಾನಿಂಗ್‌ಗಾಗಿ ಹಾಸನಕ್ಕೆ ಕಳುಹಿಸಲಾಗಿದೆ.   
ಬಾಗೂರು ರಸ್ತೆಗೆ ಹೊಂದಿಕೊಂಡಂತಿರುವ ಗಲ್ಲಿಗಳಲ್ಲಿ ಹಿಂದಿನಿಂದಲೂ ಗೋಮಾಂಸ ಕೇಂದ್ರಗಳಿದ್ದು, ಕೆಲ ದಿನಗಳ ಹಿಂದಷ್ಟೇ ಪ್ರಮುಖ ಬೀದಿಗಳಲ್ಲಿನ ವ್ಯಾಪಾರ ಮಳಿಗೆಗಳಲ್ಲಿ ಬಹಿರಂಗವಾಗಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪುರಸಭಾ ಮುಖ್ಯಾಧಿಕಾರಿಗೆ ಸಾರ್ವಜನಿಕರು ದೂರು ನೀಡಿದ ಹಿನ್ನಲೆಯಲ್ಲಿ ಶುಕ್ರವಾರ ಕಾರ್ಯಾಚರಣೆ ಮಾಡಲು ಹೋದ ಅಧಿಕಾರಿ ಗೂಸಾ ತಿನ್ನುವ ಪರಿಸ್ಥಿತಿ ಮೂಡಿ ಬಂದಿದೆ
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಅಬ್ದುಲ್ ಆದಿ ಹಾಗೂ ಅಕ್ರಂನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪಟ್ಟಣ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ
ಹಾಸನ: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಚಿಕ್ಕಪ್ಪನನ್ನೇ ಕೊಲೆ ಮಾಡಿರುವ ಘಟನೆ ಬೇಲೂರಿನಲ್ಲಿ ಗುರುವಾರ ನಡೆದಿದೆ. ಬೇಲೂರು ಬಂಟೇನಹಳ್ಳಿ ಗ್ರಾಮದ ಪುಟ್ಟಸ್ವಾಮಿ ಕೊಲೆಯಾದ ದುರ್ದೈವಿ. ಕೊಲೆ ಆರೋಪಿ ಲೋಕೇಶ್ (24)ನ್ನು ಪೊಲೀಸರು ಬಂಧಿಸಿದ್ದಾರೆ.ದೊಡ್ಡತಮ್ಮಯ್ಯನವರ ಪತ್ನಿ ತೀರಿ ಹೋಗಿದ್ದು, ಅವರಿಗೆ ತಮ್ಮ ಪುಟ್ಟಸ್ವಾಮಿ ಮನೆಯಿಂದ ಊಟ ತಂದು ಕೊಡುತ್ತಿದ್ದು, ಈ ವಿಚಾರದಲ್ಲಿ ದೊಡ್ಡತಮ್ಮಯ್ಯನ ಮಗ ಲೋಕೇಶ ಅನೇಕ ಬಾರಿ ಜಗಳ ಮಾಡಿ ಬೈದಿದ್ದ. ಈ ಬಗ್ಗೆ ಬುದ್ದಿವಾದ ಹೇಳಲಾಗಿದೆ. ಈ ವಿಚಾರದಲ್ಲಿ ಲೋಕೇಶ ತನ್ನ ಚಿಕ್ಕಪ್ಪ ಪುಟ್ಟಸ್ವಾಮಿಯನ್ನು ದುರುದ್ದೇಶದಿಂದ ಕೊಲೆ ಮಾಡಿದ್ದಾನೆ ಎಂದು ಪುಟ್ಟಸ್ವಾಮಿ ಪತ್ನಿ ಕಮಲಮ್ಮ ಬೇಲೂರು ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಲೋಕೇಶನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.