ಹಾಸನ

ಶುಲ್ಕ ವಿನಾಯ್ತಿಗೆ ಆಗ್ರಹಿಸಿ ಡಿಸಿಗೆ ಮನವಿ

Published On :

ಕ.ಪ್ರ.ವಾರ್ತೆ ,  ಹಾಸನ ,  ನ. 15
ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶುಲ್ಕ ವಿನಾಯ್ತಿಗಾಗಿ ಪ್ರತಿಭಟನೆ ಮುಂದುವರಿಸಿದ್ದು, ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.
ಶುಲ್ಕ ವಿನಾಯ್ತಿಗೆ ಆಗ್ರಹಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟದಲ್ಲಿ ಕಾಲೇಜಿನ ಆಡಳಿತ ಮಂಡಳಿಯಿಂದ ಸೂಕ್ತ ಪರಿಹಾರ ದೊರೆಯದೆ ಇರುವುದರಿಂದ ಎಂಸಿಇ ವಿದ್ಯಾರ್ಥಿಗಳ ತಂಡ ಜಿಲ್ಲಾಧಿಕಾರಿ ಭೇಟಿ ಮಾಡಿ  ಶುಲ್ಕ ವಿನಾಯಿತಿ ಕಳೆದ ಎರಡು ವುರ್ಷಗಳಿಂದ ದೊರಕದೆ ಇರುವುದರಿಂದ ಸಾವಿರಾರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ವಿದ್ಯಾಭ್ಯಾಸವನ್ನೇ ಬಿಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ಸಮಸ್ಯೆಗೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸಿ ಸರ್ಕಾರದ ಗಮನಕ್ಕೆ ತರುತ್ತೇನೆ ಹಾಗೂ ಮೂರು ನಾಲ್ಕು ದಿನಗಳ ನಂತರ ಈ ಬಗ್ಗೆ ಇನ್ನೂ ಹೆಚ್ಚಿನ ವಿವರ ನೀಡುವುದಾಗಿ ಹೇಳಿದ್ದಾರೆಂದು ಎಂಸಿಇ ವಿದ್ಯಾಥಿಂಗಳ  ಸಮಿತಿ ತಿಳಿಸಿದೆ.
ನಂತರ ವಿದ್ಯಾರ್ಥಿಗಳ ತಂಡ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.  ಈ ಬಗ್ಗೆ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದ್ದಾರೆ ಎಂದು ಸಮಿತಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.