ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟನೆ
ಚನ್ನರಾಯಪಟ್ಟಣ: ದೇಶದಲ್ಲಿ ಅಪರಾಧ ಮೊಕದ್ದೊಮೆಗಳು ಹೆಚ್ಚುತ್ತಿದ್ದು, ಅದನ್ನು ಹೋಗಲಾಡಿಸಲು ವಿದ್ಯಾರ್ಥಿಗಳಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ನ್ಯಾ. ಕೆ.ಮಹದೇವ್ ತಿಳಿಸಿದರು.
ಪಟ್ಟಣದ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕಿಲರ ಸಂಘ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತದಲ್ಲಿ ಏರ್ಪಡಿಸಿದ್ದ ಮಕ್ಕಳಿಗೆ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಸಬಲೀಕರಣಗೊಳಿಸುವ ಜವಬ್ದಾರಿ ಹೊಂದಿದ್ದು, ಸಂವಿಧಾನಾತ್ಮಕವಾಗಿ ಮಕ್ಕಳಿಗೆ ಶಿಕ್ಷಣ ನೀಡುವುದು ಪೋಷಕರು ಹಾಗೂ ಶಿಕ್ಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಮಕ್ಕಳು ಬಾಲ್ಯಾವಸ್ಥೆಯಲ್ಲಿರುವಾಗಲೇ ಅವರಲ್ಲಿ ಯಾವುದಾದರೊಂದು ಪ್ರತಿಭೆಯಿದ್ದು, ಅದನ್ನು ಹೊರತರುವ ಜವಾಬ್ದಾರಿ ಜತೆಯಲ್ಲಿಯೇ ಮಕ್ಕಳಿಗೆ ಉತ್ತಮ ಸಂಸ್ಕಾರದ ಮೂಡಿಸುವ ಅರಿವಿನ ಜವಬ್ದಾರಿ ಕೂಡ ಇರುತ್ತದೆ ಎಂದು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ ಪಾಂಡು, ಸರ್ಕಾರಿ ಸಹಾಯಕ ಅಭಿಯೋಜಕ ಮೃತ್ಯುಂಜಯ, ಎಸ್ಡಿಎಂಸಿ ಅಧ್ಯಕ್ಷ ದೇವರಾಜು, ವಕೀಲರಾದ ಕುಮಾರ್, ವೆಂಕಟರಮಣೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

