ತಂತ್ರಜ್ಞಾನದ ಭರಾಟೆಯಲ್ಲಿ ಹಿನ್ನೆಲೆಗೆ ಸರಿದ ಸಂಸ್ಕೃತಿ: ಎಸ್ಪಿ ಚನ್ನಣ್ಣನವರ್
ಬೇಲೂರು: ತಂತ್ರಜ್ಞಾನದ ಭರಾಟೆಯಲ್ಲಿ ವಿದ್ಯಾವಂತರು ನಮ್ಮ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ಜಿಲ್ಲಾ ಎಸ್ಪಿ ರವಿ ಚನ್ನಣ್ಣನವರ್ ವಿಷಾದಿಸಿದರು.
ಪಟ್ಟಣದ ಶ್ರೀಚನ್ನಕೇಶವಸ್ವಾಮಿ ದೇವಾಲಯ ಕೋಟೆ ಬಯಲು ರಂಗಮಂದಿರಲ್ಲಿ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷ್ ಮೆಕಾಲೆ ಶಿಕ್ಷಣ ಪದ್ಧತಿ ಭಾರತದಲ್ಲಿ ಇನ್ನು ಜೀವಂತವಾಗಿದೆ. ಈ ಶಿಕ್ಷಣದಿಂದ ಉತ್ತಮ ಅಂಕ ಗಳಿಸಿ ಜೀವನ ಸಾಗಿಸಲು ಒಂದು ಹುದ್ದೆಯಲ್ಲಿ ಇರಬಹುದು. ಆದರೆ ರಾಷ್ಟ್ರ ಪ್ರೇಮ, ನಾಡು ನುಡಿಯ ಬಗ್ಗೆ ಪ್ರೀತಿ, ಕುಟುಂಬ ವ್ಯಾತ್ಸಲ್ಯಗಳನ್ನು ಪಡೆಯುವ ಶಿಕ್ಷಣ ಇಂದು ನಮ್ಮಲ್ಲಿ ಇಲ್ಲ ಎಂದು ಹೇಳಿದರು.
ಪೋಷಕರು ಈ ನಿಟ್ಟಿನಲ್ಲಿ ಮಕ್ಕಳಿಗೆ ಸಂಸ್ಕೃತಿ ಹಾಗೂ ಸಂಸ್ಕಾರದ ಬಗ್ಗೆ ಮಾಹಿತಿ ನೀಡಿ ಬೆಳೆಸುವ ಅಗತ್ಯತೆ ಇದೆ ಎಂದ ಅವರು, ಮುಂದಿನ ದಿನಗಳಲ್ಲಿ ಭವ್ಯ ಭಾರತದ ಬದಲಾವಣೆ ಯುವಕರಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ವೈಡಿಡಿ ಪ್ರಥಮ ದರ್ಜೆ ಕಾಲೇಜು ಕನ್ನಡ ಮುಖ್ಯಸ್ಥ ಪ್ರೊ. ಜಯಣ್ಣಗೌಡ ಮಾತನಾಡಿ, 18 ತಿಂಗಳ ಹಿಂದೆ ಹುಟ್ಟಿದ ವೇಲಾಪುರಿ ಸಾಹಿತ್ಯ ವೇದಿಕೆ ಇಂದು ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದೆ.
ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ನಾಯಕತ್ವ ಬೆಳೆಸುವ ದಿಸೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ವೇದಿಕೆ ವತಿಯಿಂದ 10 ಮಕ್ಕಳ ದತ್ತು ಸ್ವೀಕಾರ, ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ಧನ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜನ ಪರ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ವೇದಿಕೆ ಅಧ್ಯಕ್ಷ ಎಚ್.ಎಂ.ದಯಾನಂದ್, ಕಾರ್ಯದರ್ಶಿ ಮ. ಶಿವಮೂರ್ತಿ, ಸಾಹಿತಿ ಬೇಲೂರು ಕೃಷ್ಣಮೂರ್ತಿ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಎಚ್.ಬಿ. ಮದನಗೌಡ, ಚನ್ನಕೇಶವೇಗೌಡ, ಡಾ.ನರಸೇಗೌಡ, ವೈ.ಎಸ್.ಸಿದ್ದೇಗೌಡ, ಯಮಸಂದಿ ಪಾಪು., ತಾಪಂ ಅಧ್ಯಕ್ಷೆ ಸಮಿತ್ರ ರುದ್ರಯ್ಯ ಇತರರು ಇದ್ದರು. ಪತ್ರಕರ್ತ ಬಿ.ಎಂ.ರವೀಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

