ಹಾಸನ

ಸಹಕಾರ ಕ್ಷೇತ್ರ ಬಲವರ್ಧನೆಗೆ ಸರ್ಕಾರ ಬದ್ಧ

Published On :

ಕ.ಪ್ರ.ವಾರ್ತೆ ಚಾಮರಾಜನಗರ ನ. 18
ಸಹಕಾರ ಸಂಘಗಳ ಮೂಲಕ ರೈತರಿಗೆ 12 ಸಾವಿರ ಕೋಟಿಗಳ ಸಾಲ ನೀಡಲು ಸರ್ಕಾರ ಮುಂದಾಗಿದ್ದು, ಇದು ಗ್ರಾಮಾಂತರ ಪ್ರದೇಶದ ಸಹಕಾರ ಸಂಘಗಳಿಗೆ ವರದಾನವಾಗಲಿದೆ ಎಂದು ಮೈಸೂರು-ಚಾ.ನಗರ ಹಾಲು ಒಕ್ಕೂಟದ ನಿರ್ದೇಶಕ ಎಚ್.ಎಸ್.ಬಸವರಾಜು ಹೇಳಿದರು.
ತಾಲೂಕಿನ ಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ 60ನೇ ಅಖಿಲ ಭಾರತ ಸಹಕಾರ ಸಪ್ತಾಹ-2013ರ 5ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಹಕಾರಿ ಬ್ಯಾಂಕ್‌ನಲ್ಲಿ ಶೇ.25ರಷ್ಟು ಹೊಸ ಸದಸ್ಯರಿಗೆ ಸಾಲ ನೀಡುವ ಮೂಲಕ ಸಹಕಾರ ಕ್ಷೇತ್ರವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದರು.
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು 10ರಿಂದ 15 ಗ್ರಾಮಗಳನ್ನು ಸೇರಿಸಿ ಸಹಕಾರ ಸಂಘಗಳನ್ನು ಸ್ಥಾಪಿಸಿ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಿದರು. ಹಾಲು ಉತ್ಪಾದನೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಪ್ರತಿ ಗ್ರಾಮಗಳಲ್ಲಿ ಡೈರಿಗಳು ಸ್ಥಾಪನೆಗೊಂಡು ಹಾಲು ಸಂಗ್ರಹವಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಗ್ರಾಮದ ಪ್ರತಿಯೊಬ್ಬರೂ ಸಂಘದ ಸವಲತ್ತನ್ನು ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ಯೋಜನೆಗಳು ಸಹ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದೆ. ಸಹಕಾರ ಸಂಘಗಳ ಅಧಿಕಾರಿಗಳು ಹಾಗು ಆಡಳಿತ ಮಂಡಳಿ ಕ್ರಿಯಾಶೀಲವಾಗಿ ಕೆಲಸ ಮಾಡಿದರೆ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಸಹಕಾರಿ ಸಂಘಗಳಿಂದ ಪಡೆದ ಸಾಲ ಮನ್ನಾವಾಗುತ್ತದೆ ಎಂಬ ಕಲ್ಪನೆ ಅನೇಕರಲ್ಲಿದೆ. ಇದರಿಂದ ತಮ್ಮ ಸಹಕಾರಿ ಸಂಸ್ಥೆಯೇ ನಷ್ಟ ಅನುಭವಿಸುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಗುರುಮಲ್ಲಪ್ಪ ಮಾತನಾಡಿ, ಗ್ರಾಮಕ್ಕೊಂದು ಸಹಕಾರ ಸಂಘ ರಚನೆಯಾಗುವಂತಾಗಬೇಕು ಎಂದರು.
ನಿವೃತ್ತ ಸಹಕಾರ ಅಭಿವೃದ್ಧಿ ಅಧಿಕಾರಿ ಉತ್ತಪ್ಪ ಉಪನ್ಯಾಸ ನೀಡಿದರು.
ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಚ್.ಎನ್.ಸುಂದರರಾಜ್, ಮಂಗಲ ಡೈರಿ ಅಧ್ಯಕ್ಷ ಮಹದೇವಶೆಟ್ಟಿ, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಕೆ.ಮಹದೇವಶೆಟ್ಟಿ, ಒಕ್ಕೂಟದ ವಿಸ್ತರಣಾಧಿಕಾರಿ ಎಸ್.ಎಂ. ವೆಂಕಟೇಶ್, ಪಿಎಸಿಸಿ ಬ್ಯಾಂಕ್ ನಿರ್ದೇಶಕ ಹೊಸೂರು ಸಿ.ಉಮೇಶ್, ಒಕ್ಕೂಟ ವ್ಯವಸ್ಥಾಪಕ ಮಲ್ಲಿಕಾರ್ಜುನಸ್ವಾಮಿ, ಕಾರ್ಯದರ್ಶಿ ಕುಮಾರಸ್ವಾಮಿ ಹಾಗೂ ವಿವಿಧ ಡೈರಿ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.