ಅಗತ್ಯ ವಸ್ತು ಬೆಲೆ ಏರಿಕೆ ಖಂಡಿಸಿ ಬೃಹತ್ ರ್ಯಾಲಿ
ಕ.ಪ್ರ.ವಾರ್ತೆ ಹಾಸನ ನ.18
ಸಿಪಿಎಂ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದ ಅಂಗವಾಗಿ ಬೃಹತ್ ರ್ಯಾಲಿ ಮತ್ತು ಬಹಿರಂಗ ಸಭೆಯನ್ನು ನೂರಾರು ಕಾರ್ಯಕರ್ತರು ಸೋಮವಾರ ಅರೆಹಳ್ಳಿಯಲ್ಲಿ ನಡೆಸಿದರು.
ಈ ಸಂದರ್ಭದಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ವಿ.ಸುಕುಮಾರ್ ಮಾತನಾಡಿ, ಬೆಲೆ ಏರಿಕೆ ದುಡಿಯುವ ವರ್ಗದ ಶತ್ರುವಾಗಿ ಬೆಳೆಯುತ್ತಿದ್ದು, ಇದರಿಂದ ದಿನನಿತ್ಯ ಕಾರ್ಮಿಕರು ಅತ್ಯಂತ ಸಂಕಷ್ಟದಲ್ಲಿ ನರಳುವಂತಾಗಿದೆ. ಹಲವು ವರ್ಷಗಳಿಂದ ದುಡಿಯುವ ವರ್ಗದ ಜನ ತಿಂಗಳಿಗೆ 10 ಸಾವಿರ ರು. ಕನಿಷ್ಠ ಕೂಲಿ ಜಾರಿ ಮಾಡುವಂತೆ ಹೋರಾಟ
ನಡೆಸುತ್ತಿದ್ದರೂ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆಯೇ ಹೊರತು ಕನಿಷ್ಠ ಕೂಲಿ ಜಾರಿಯಗಲಿಲ್ಲ ಎಂದು ಕಿಡಿಕಾರಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಶ್ ಮಾತನಾಡಿ, ದುಡಿಯುವ ಜನರ ಹಕ್ಕುಗಳನ್ನು ಖಾತ್ರಿಗೊಳಿಸಲು ಯಾವ ಸರ್ಕಾರಗಳಿಗೂ ಸಾಧ್ಯವಾಗಲಿಲ್ಲ. ಮಾರುಕಟ್ಟೆಗಳನ್ನು ಬೃಹತ್ ಕಂಪನಿಗಳು ನಿಯಂತ್ರಿಸುತ್ತಿರುವುದರಿಂದ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಚಿಲ್ಲರೆ ವ್ಯಾಪಾರದಲ್ಲಿ ವಿದೇಶಿ ನೇರ ಬಂಡವಾಳ ಹೂಡುವ ಮೂಲಕ ಲಕ್ಷಾಂತರ ಸಣ್ಣ ಪುಟ್ಟ ಚಿಲ್ಲರೇ ವ್ಯಾಪಾರಸ್ಥರನ್ನು ಬೀದಿಗೆ ತರಲು ಕೇಂದ್ರ ಸರ್ಕಾರ ಹೊರಟಿದೆ ಎಂದರು.
ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎಚ್.ಅರ್.ನವೀನ್ಕುಮಾರ್ ಮಾತನಾಡಿ, ಪ್ರಸ್ತುತ ನರೇಂದ್ರಮೋದಿಯನ್ನು ದೇಶದ ಹರಿಕಾರ ಎಂದು ಬಿಂಬಿಸಲಾಗುತ್ತಿದೆ. ಆದರೆ ನರೇಂದ್ರಮೋದಿ ಇದುವರೆಗು ರೈತ, ಕಾರ್ಮಿಕ, ಕೂಲಿಕಾರ, ದಲಿತರ, ಅಲ್ಪಸಂಖ್ಯಾತರ ಬವಣೆಗಳ ಬಗ್ಗೆ ಮಾತನಾಡಿಲ್ಲ ಎಂದು ಕಿಡಿಕಾರಿದರು.
ಮೆರವಣಿಗೆ: ಬಹಿರಂಗ ಸಭೆಗೂ ಮುನ್ನ ನೂರಾರು ಕಾರ್ಯಕರ್ತರು ಕಾರ್ಮಿಕರ ಕೇಂದ್ರವಾಗಿರುವ ಅರೇಹಳ್ಳಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಪ್ಲಾಂಟೇಷನ್ ಕಾರ್ಮಿಕರ ಸಂಘದ ಅಧ್ಯಕ್ಷ ರಾಘುಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಶಾವೆಲ್ ಹಮೀದ್, ಎಸ್ಎಫ್ಐನ ಜಿಲ್ಲಾ ಅಧ್ಯಕ್ಷ ಪೃಥ್ವಿ, ಪ್ಲಾಂಟೇಷನ್ ಕಾರ್ಮಿಕರ ಮುಖಂಡ ಹರೀಶ್, ಸ್ವಾಗತ ಸಮಿತಿ ಅಧ್ಯಕ್ಷ ಜಯಮ್ಮ, ಕಾರ್ಯದರ್ಶಿ ಶಿವಸ್ವಾಮಿ ಭಾಗವಹಿಸಿ ಮಾತನಾಡಿದರು.
ಕಳೆದ ನ.15 ರಿಂದ17 ರವರೆಗೆ ಮೂರು ದಿನಗಳ ಕಾಲ ಅರೇಹಳ್ಳಿಯ ರೋಟರಿ ಭವನದಲ್ಲಿ ನಡೆದ ಸಿಪಿಐಎಂನ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರದಲ್ಲಿ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜಿ.ಎನ್.ನಾಗರಾಜ್, ನಿತ್ಯಾನಂದಸ್ವಾಮಿ ಮತ್ತಿತರರು ರ್ಯಾಲಿ ನೇತೃತ್ವವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

