ಸ್ವಾಸ್ಥ್ಯ ಬಿಮಾ ಯೋಜನೆಯಡಿ 42,500 ಫಲಾನುಭವಿಗಳ ಗುರ್ತು: ಗೋಪಾಲಕೃಷ್ಣ
ಕ.ಪ್ರ.ವಾರ್ತೆ ಹಾಸನ ನ. 19
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಜಾರಿಗೆ ತಂದಿರುವ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಂತೆ ನಾನಾ ಕಾರ್ಮಿಕ ವರ್ಗಗಳ ಕುಟುಂಬ ಸದಸ್ಯರಿಗೆ ಆರೋಗ್ಯ ವಿಮಾ ಸೌಲಭ್ಯವನು ಸಂಬಂಧಪಟ್ಟ ಅಧಿಕಾರಿಗಳು ಕ್ರಮಬದ್ಧವಾಗಿ ಒದಗಿಸಲು ಶ್ರಮಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ನಡೆದ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 2013-14ನೇ ಸಾಲಿಗೆ 42,500 ಫಲಾನುಭವಿಗಳನು ಗುರುತಿಸಲಾಗಿದೆ. ಇವರಿಗೆ ಈ ಯೋಜನೆಯ ಸೌಲಭ್ಯವನು ಒದಗಿಸಲು ಪ್ರಾಮಾಣಿಕ ಪ್ರಯತ ಮಾಡಬೇಕು ಎಂದರು.
ಸಣ್ಣ ಪುಟ್ಟ ಕಾರಣಗಳಿಗಾಗಿ ಈ ಸೌಲಭ್ಯ ನಿರಾಕರಿಸುವುದು ಸೂಕ್ತವಲ್ಲ. ಇದರಿಂದಾಗಿ ವಿಮಾ ಕಂಪನಿಗಳಿಗೆ ಸರ್ಕಾರದ ಹಣ ಅನಾವಶ್ಯಕವಾಗಿ ಹರಿದು ಹೋಗುತ್ತದೆ. ಇದನು ತಡೆಗಟ್ಟಲು ಕ್ರಮ ಜರುಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಕಾರ್ಮಿಕ ಇಲಾಖಾ ಅಧಿಕಾರಿಗಳು ಎಲ್ಲಾ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ದಾಖಲೆಗಳನು ಖುದ್ದಾಗಿ ಪರಿಶೀಲಿಸಿ ಫಲಾನುಭವಿಗಳಿಗೆ ಈ ಸೌಲಭ್ಯವನು ಒದಗಿಸಬೇಕು. ನಾನಾ ಇಲಾಖೆಗಳ ಸಹಕಾರದೊಂದಿಗೆ ಫಲಾನುಭವಿಗಳಿಗೆ ಹೆಚ್ಚಿನ ಅರಿವು ಮೂಡಿಸಿ ಸೌಲಭ್ಯದಿಂದ ವಂಚಿತರಾಗದಂತೆ ಎಚ್ಚರ ವಹಿಸಬೇಕೆಂದರು.
ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆ ಅನುಷ್ಠಾನದಲ್ಲಿ ಬಿಗಿ ನಿಲುವನು ವಹಿಸಿದ್ದು ಇದರಿಂದ ಸಾಕಷ್ಟು ಹಣ ಫಲಾನುಭವಿಗಳಿಗೆ ದೊರಕಿಲ್ಲ. ಈ ಬಗ್ಗೆ ಕಾರ್ಮಿಕ ಅಧಿಕಾರಿಗಳು ಮಾಹೆಯ ಪ್ರಗತಿ ವರದಿಯನು ಸಂಗ್ರಹಿಸಿ ಅಂತಹ ಆಸ್ಪತ್ರೆಗಳಿಗೆ ಭೇಟಿ ನೀಡಿ ಅವರಿಗೆ ಸೂಕ್ತ ತಿಳುವಳಿಕೆ ನೀಡಬೇಕೆಂದರು.
ಯೋಜನೆಯ ಅನುಷ್ಠಾನದಲ್ಲಿ ಆರೋಗ್ಯ ಇಲಾಖೆಯ ಪಾತ್ರ ಪ್ರಮುಖವಾಗಿದ್ದು, ಕಾರ್ಮಿಕ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು ಯೋಜನೆಯನು ಯಶಸ್ವಿಗೊಳಿಸುವಂತೆ ಹಾಗೂ ತಾ. ಆಸ್ಪತ್ರೆ ವೈದ್ಯಾಧಿಕಾರಿಗಳು, ಸಣ್ಣ ಕಾರಣಕ್ಕಾಗಿ ಸೌಲಭ್ಯ ನಿರಾಕರಿಸುವ ಬದಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಸರ್ಕಾರದ ಅನುದಾನವನು ಸದುಪಯೋಗ ಪಡಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೂಚನೆ ನೀಡಿದರು. ನಾನಾ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಗಳು, ಕಾರ್ಮಿಕ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಇಲಾಖಾ ಅಧಿಕಾರಿ ಪ್ರಹ್ಲಾದ್ ಸಭೆಗೆ ಮಾಹಿತಿ ನೀಡಿದರು.
ಯುವತಿ ಅಪಹರಣಕ್ಕೆ ಮೂಲಾ ನಕ್ಷತ್ರ ಕಾರಣ!
ಹಾಸನ: ಮುಕ್ತ ವಿವಿ ವಿದ್ಯಾರ್ಥಿನಿ ಅಪಹರಣ ಪ್ರಕರಣ ಮಂಗಳವಾರ ತಿರುವು ಪಡೆದುಕೊಂಡಿದೆ. ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಹಾಗೂ ಚೇತನ್ಕುಮಾರ್ ಮಧ್ಯೆ ಮೊದಲೇ ಪ್ರೇಮವಿತ್ತು. ವಿದ್ಯಾರ್ಥಿನಿಯದ್ದು ಮೂಲಾ ನಕ್ಷತ್ರವಾಗಿದ್ದರಿಂದ ಚೇತನ್ಕುಮಾರ್ನ ಪೋಷಕರು ಆಕೆಯೊಂದಿಗಿನ ವಿವಾಹ ನಿರಾಕರಿಸಿದ್ದಾರೆ.
ಆದರೆ, ಚೇತನ್ಕುಮಾರ್ ಅದನೆಲ್ಲ ಬದಿಗೊತ್ತಿ ಆಕೆಯನು ಸೋಮವಾರ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ ಅಷ್ಟೇ. ಆದಕ್ಕೆ ವಿದ್ಯಾರ್ಥಿನಿಯ ಒಪ್ಪಿಗೆ ಕೂಡಾ ಇದೆ ಎಂದು ಪೊಲೀಸರು ಹೇಳುತ್ತಿದ್ದು, ಇದನು ಅಪಹರಣ ಎಂದು ಹೇಳಲು ಬರುವುದಿಲ್ಲ ಎನಲಾಗಿದೆ. ಆದರೆ ವಿದ್ಯಾರ್ಥಿನಿಯ ಪೋಷಕರು ಮಾತ್ರ ಹಾಸನ ಬಡಾವಣೆ ಠಾಣೆಯಲ್ಲಿ ತಮ್ಮ ಮಗಳನು ಅಪಹರಿಸಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

